ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ!

ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ಅಶ್ವತ್ಥ್ ನಗರದಲ್ಲಿ ನಡೆದಿದೆ. ನವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತೆ.

ನವ್ಯಶ್ರೀಗೆ 5 ತಿಂಗಳ ಹಿಂದೆ ಆಕಾಶ್ ಎಂಬ ಯುವಕನ ಜೊತೆ ವಿವಾಹವಾಗಿತ್ತು. ನಿನ್ನೆ ರಾತ್ರಿ ಕಾರ್ ಶೆಡ್‍ ನಲ್ಲಿ ನೇಣು ಬಿಗಿದು, ಆತ್ಮಹತ್ಯೆಗೆ ಶರಣಾಗಿದ್ದಾಳೆ. ಘಟನೆಗೆ ಸಂಬಂಧಿಸಿ ಆಕೆಯ ಕುಟುಂಬಸ್ಥರು ಮಾತನಾಡಿ, ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ನವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 

Leave a Reply