ಬಿಎಸ್ ಸಿ ವಿದ್ಯಾರ್ಥಿನಿ ಆತ್ಮಹತ್ಯೆ!

ಖಾಸಗಿ ಕಾಲೇಜೊಂದರಲ್ಲಿ ಬಿಎಸ್‌ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಬೆಂಗಳೂರಿನ ಸೋಲದೇವನಹಳ್ಳಿಯಲ್ಲಿ ಗುರುವರಾ ಈ ಘಟನೆ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ರಮಿತಾ ರಾಯ್ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ರಮಿತಾ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ವಾಸವಿದ್ದಳು.

ತಾನು ವಾಸವಿದ್ದ ಮನೆಯಲ್ಲಿಯೇ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಆಕೆಯ ಶವ ಪತ್ತೆಯಾಗಿದೆ. ಆಕೆಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಆಕೆಯ ಪೋಷಕರು ಶುಕ್ರವಾರ ಆಗಮಿಸುವ ಸಾಧ್ಯತೆಯಿದೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಸೋಲದೇವನಹಳ್ಳಿ ಠಾಣೆ ಪೊಲೀಸರು ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply