ಮಲ್ಪೆ: ಬ್ಯಾಂಕ್ ನ ಶಾಖಾ ವ್ಯವಸ್ಥಾಪಕ ನೇಣು ಬಿಗಿದು ಆತ್ಮಹತ್ಯೆ!

ಮಲ್ಪೆ: ಇಲ್ಲಿನ ಕೋ ಆಪರೇಟಿವ್ ಬ್ಯಾಂಕ್ ನ ಶಾಖಾ ವ್ಯವಸ್ಥಾಪಕ ಲಾಡ್ಜ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಸಂಜೆ ಬೆಳಕಿಗೆ ಬಂದಿದೆ.

ಉಡುಪಿ ಮಂಗಳೂರು ಭಾಗದಲ್ಲಿ ಕಾರ್ಯಚರಿಸುತ್ತಿರುವ. ಹೆಸರಾಂತ ಕೋ ಆಪರೇಟಿವ್ ಬ್ಯಾಂಕ್ ನ ಮಲ್ಪೆ ಶಾಖೆಯ ವ್ಯವಸ್ಥಾಪಕ ಸಾಲಿಗ್ರಾಮದ ನಿವಾಸಿ, ಪ್ರಸ್ತುತ ತೆಂಕನಿಡಿಯೂರಿನಲ್ಲಿ ವಾಸವಾಗಿರುವ ಸುಬ್ಬಣ್ಣ (43) ಮಲ್ಪೆಯ ಲಾಡ್ಜ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ತಿಳಿದುಬಂದಿದೆ. ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

 
 
 
 
 
 
 
 
 
 
 

Leave a Reply