ನವವಿವಾಹಿತೆ ಆತ್ಮಹತ್ಯೆ!

ಪರಸ್ಪರ ಪ್ರೀತಿಸಿ ಕಳೆದ ಮಾರ್ಚ್‌ ನಲ್ಲಿ ವಿವಾಹವಾಗಿದ್ದ ನೊಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಜ್ಜಳ ಗ್ರಾಮದ ನವವಿವಾಹಿತೆ ಶಮಿತಾ (24) ದಾಸನಕೊಡಿಗೆಯ ವಿದ್ಯಾರ್ಥ್ ಜೊತೆ ವಿವಾಹವಾಗಿದ್ದರು. ವಿದ್ಯಾರ್ಥ್ ಸೋಮೇಶ್ವರ ವನ್ಯಜೀವಿ ಅಭಯಾರಣ್ಯ ವಿಭಾಗದ ಅಮಾವಾಸ್ಯೆಬೈಲು ವಲಯ ಅರಣ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ರಾತ್ರಿ ಪಾಳಿ ಕೆಲಸಕ್ಕೆ ಪತಿ ವಿದ್ಯಾರ್ಥ್ ತೆರಳಿದ್ದರು. ಮನೆಯಲ್ಲಿ ಪತಿಯ ತಂದೆ, ತಾಯಿ ಇದ್ದರು. ಕೊಠಡಿಯಲ್ಲಿ ಡೆತ್‌ನೋಟ್ ಪತ್ತೆಯಾಗಿದ್ದು,ಆರೋಗ್ಯ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಉಲ್ಲೇಖಿಸಲಾಗಿದೆ.ಈ ಘಟನೆಯು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ದಾಸನಕೂಡಿಗೆ ಗ್ರಾಮದಲ್ಲಿ ನಡೆದಿದೆ.

ತೀರ್ಥಹಳ್ಳಿಯ ಜೆ.ಸಿ ಆಸ್ಪತ್ರೆಯಲ್ಲಿ ತಹಶೀಲ್ದಾರ್ ಜಕ್ಕನಗೌಡರ್ ಉಪಸ್ಥಿತಿಯಲ್ಲಿ ಮರಣೋತ್ತರ ಪರೀಕ್ಷೆ ನಡೆಯಿತು. ಆಗುಂಬೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

 
 
 
 
 
 
 
 
 
 
 

Leave a Reply