ಸುರತ್ಕಲ್ :ಚೂರಿ ವ್ಯಕ್ತಿ ಮೃತ್ಯು…!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಾಪುರ 4ನೇ ಬ್ಲಾಕ್ ನೈತಂಗಡಿ ಬಳಿ ದುಷ್ಕರ್ಮಿಗಳಿಂದ ಚೂರಿ ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದೆ. ಸಾವನ್ನಪ್ಪಿ ದವರು ಕೃಷ್ಣಾಪುರ ನಿವಾಸಿ ಜಲೀಲ್ ಎಂದು ತಿಳಿದು ಬಂದಿದೆ.

ಜಲೀಲ್ ಅವರ ಮೇಲೆ ಇಬ್ಬರು ದುಷ್ಕರ್ಮಿಗಳ ತಂಡ ಏಕಾಏಕಿ ದಾಳಿ ಮಾಡಿ ಚೂರಿ ಇರಿದು ಪರಾರಿಯಾಗಿದ್ದು, ಗಂಭೀರ ಗಾಯಗೊಂಡ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ ‌
ಘಟನೆ ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿದ್ದಾರೆ. ಪೊಲೀಸರು ಈ ಪ್ರಕರಣವನ್ನು ತನಿಖೆ ನಡೆಸುತ್ತಿದ್ದಾರೆ.
 
 
 
 
 
 
 
 
 
 
 

Leave a Reply