ತಲಪಾಡಿ: ಕಾರು ಚಾಲಕನ ಮೇಲೆ ಟೋಲ್ ಗೇಟ್ ಸಿಬಂದಿ ಹಲ್ಲೆ!

ಮಂಗಳೂರು: ಕಾರು ಚಾಲಕನ ಮೇಲೆ ತಲಪಾಡಿ ಟೋಲ್ ಗೇಟ್ ಸಿಬ್ಬಂದಿ ಹಲ್ಲೆ ನಡೆಸಿದ ಘಟನೆ ನಡೆದಿದ್ದು ಇದನ್ನು ಇತರೇ ವಾಹನಗಳ ಪ್ರಯಾಣಿಕರು ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ.

ಕರ್ನಾಟಕ -ಕೇರಳ ಗಡಿಭಾಗದ ತಲಪಾಡಿಯಲ್ಲಿರುವ ಟೋಲ್ ಗೇಟ್ ನಲ್ಲಿ ಮಂಗಳೂರಿನಿಂದ ಕೇರಳ ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ಮೇಲೆ ಹಲ್ಲೆ ನಡೆಸಲಾಗಿದೆ. ಕಾರಿನಲ್ಲಿದ್ದ ಕುಟುಂಬಸ್ಥರ ಎದುರೇ ಟೋಲ್ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಯುವಕರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.‌ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ. ಟೋಲ್ ಸಿಬಂದಿ ಗೂಂಡಾ ವರ್ತನೆಯ ವಿಡಿಯೋ ವೈರಲ್ ಆಗುತ್ತಿದೆ.

 
 
 
 
 
 
 
 
 
 
 

Leave a Reply