ವಿನಯ್ ಕುಲಕರ್ಣಿಗೆ ಮತ್ತೆ ಜೈಲೇ ಗತಿ

ಧಾರವಾಡ: ಸಿಬಿಐ ಪೊಲೀಸರಿಂದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡರ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಪಟ್ಟು, ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಮಾಜಿ ಸಚಿವ ವಿನಯ್​ ಕುಲಕರ್ಣಿಗೆ ಇಂದು ಕೂಡ ಬೇಲ್ ದೊರೆತಿಲ್ಲ.

ಹೈಕೋರ್ಟ್ ಈ ಅರ್ಜಿಯ ವಿಚಾರಣೆ ಯನ್ನು ಮುಂದೂಡಿದೆ. ಈ ಹಿನ್ನೆಲೆ ಇನ್ನೂ ಕೆಲವು ದಿನ ವವಿನಯ್ ಗೆ ಜೈಲೆ ಗತಿ ಯಾಗಿದೆ.

ಇವರು ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಿಬಿಐ ಕಾಲಾವಕಾಶ ಕೋರಿದ ಕಾರಣ ಅರ್ಜಿಯ ವಿಚಾರಣೆಯನ್ನು ಮುಂದೂಡಲಾಗಿದೆ. ಈ ಹಿಂದೆ ನ.5ರಂದು ಬಂಧನಕ್ಕೊಳಪಟ್ಟಿದ್ದ ವಿನಯ್ ಕುಲಕರ್ಣಿಗೆ ಜಿಲ್ಲಾ ನ್ಯಾಯಾಲಯ ನ.9ರಂದು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ನಂತರ ನವೆಂಬರ್ 23ರಂದು ನ್ಯಾಯಾಂಗ ಬಂಧನದ ಮೊದಲ ಅವಧಿ ಅಂತ್ಯ ಗೊಂಡಿದ್ದು, ಈ ಹಿನ್ನೆಲೆಯಲ್ಲಿ ನ್ಯಾಯಾಲಯ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿ ಮತ್ತೆ 14 ದಿನಗಳವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶಿಸಿತ್ತು.

ಇನ್ನು 2016ರ ಜೂನ್ 15ರಲ್ಲಿ ತನ್ನದೇ ಮಾಲೀಕತ್ವದ ಉದಯ್ ಜಿಮ್ನಲ್ಲಿ ಯೋಗೀಶ್ ಗೌಡ ಬರ್ಬರವಾಗಿ ಹತ್ಯೆ ಯಾಗಿದ್ದರು. ಈ ಸಂಬಂಧ ಸಿಬಿಐ ವಿಚಾರಣೆ ಕೈಗೆತ್ತಿಕೊಂಡಿದ್ದು, ಕೊಲೆ ಕೇಸ್ನಲ್ಲಿ ವಿನಯ್ ಕುಲಕರ್ಣಿ ಕೈವಾಡವಿರುವ ಮತ್ತು ಪ್ರಭಾವ ಬಳಸಿ ಕೇಸು ಮುಚ್ಚಿಸಿರುವ ಆರೋಪವಿದೆ.

 
 
 
 
 
 
 
 
 

Leave a Reply