ಹಿರಿಯ ನಟಿ ವಿನಯಪ್ರಸಾದ್ ಮನೆಯಲ್ಲಿ ನಗದು ದೋಚಿದ ಕಳ್ಳರು!

ನಟಿ ವಿನಯಪ್ರಸಾದ್ ಮನೆಯ ಬೀಗ ಒಡೆದು ನುಗ್ಗಿದ ಕಳ್ಳರು ಬೆಡ್‌ರೂಮ್‌ನಲ್ಲಿದ್ದ 7 ಸಾವಿರ ರೂಪಾಯಿ ನಗದು ದೋಚಿ ಪರಾರಿಯಾಗಿದ್ದಾರೆ. ಈ ಬಗ್ಗೆ ನಟಿ ವಿನಯಪ್ರಸಾದ್ ನಂದಿನಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ವಿನಯಪ್ರಸಾದ್ ಮತ್ತು ಪತಿ ಜ್ಯೋತಿಪ್ರಕಾಶ್ ಹತ್ರಿ ಅವರು ಅ.22ರಂದು ತಮ್ಮ ಸ್ವಂತ ಊರಾದ ಉಡುಪಿಗೆ ಹೋಗಿದ್ದರು. ಅ.26ರಂದು ಸಂಜೆ 4.30ರ ಸುಮಾರಿಗೆ ಮನೆಗೆ ವಾಪಸ್ ಬಂದಾಗ ಕಳ್ಳತನ ಆಗಿರುವುದು ಗಮನಕ್ಕೆ ಬಂದಿತ್ತು.

ಮನೆಯ ಮುಂಬಾಗಿಲಿನ ಬೀಗ ಒಡೆದು ಒಳಗೆ ಹೊಕ್ಕಿದ್ದ ಕಳ್ಳರು, ಬೆಡ್‌ರೂಮ್‌ನಲ್ಲಿದ್ದ 7 ಸಾವಿರ ರೂ. ನಗದು ದೋಚಿ ಪರಾರಿಯಾಗಿದ್ದಾರೆ. ಈ ಸಂಬಂಧ ನಟಿ ವಿನಯಪ್ರಸಾದ್ ದೂರು ನೀಡಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 
 
 
 
 
 
 
 
 

Leave a Reply