ಮುಸ್ಲಿಂ ಸಮುದಾಯದ ಮದುವೆಯಲ್ಲಿ ಕೊರಗಜ್ಜನ ವೇಷ ಧರಿಸಿ ಡಾನ್ಸ್ ಮಾಡಿದ ಮದುಮಗ

ಮಂಗಳೂರು:  ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷಭೂಷಣ  ಹೋಲುವಂತೆ  ಧರಿಸಿ ಕುಣಿದು ಕುಪ್ಪಳಿಸುತ್ತಿರುವ  ವಿಡಿಯೋ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.  ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದಲ್ಲಿ ನಡೆದಿದೆ ಎನ್ನಲಾಗಿದೆ.  

ಕೊಳ್ನಾಡು ಗ್ರಾಮದ ಅಝೀಝ್ ಎಂಬವರ ಮಗಳ ಮದುವೆ ದಿನ ಈ ಘಟನೆ ನಡೆದಿದ್ದು, ಮಂಜೇಶ್ವರ ತಾಲೂಕಿನ ಉಪ್ಪಳದ ಯುವಕನ ಜೊತೆ ಅಝೀಝ್ ಪುತ್ರಿಯ ವಿವಾಹ ಮಧ್ಯಾಹ್ನ ನಡೆದಿದ್ದು, ಸಾವಿರಾರು ಜನರಿಗೆ ಔತಣ ಕೂಟವನ್ನು ಏರ್ಪಡಿಸಿದ್ದರು.

ಅದೇ ದಿನ ರಾತ್ರಿ ಮುಸ್ಲಿಂ ಸಂಪ್ರದಾಯದಂತೆ ವರ ತನ್ನ 50ಕ್ಕೂ ಹೆಚ್ಚು ಸ್ನೇಹಿತರೊಂದಿಗೆ ವಧುವಿನ ಮನೆಗೆ (ತಾಳ) ಆಗಮಿಸಿದ್ದಾನೆ.  ತಡರಾತ್ರಿ ಆಗಮಿಸಿದ ವರನ ಬಳಗ ವಧುವಿನ ಮನೆ ಮುಂದಿನ ರಸ್ತೆಯಲ್ಲಿ ಹಾಡು ಹೇಳಿ ಕುಣಿಯುತ್ತಾ ಬಂದಿದ್ದು, ತುಳುನಾಡಿನ ಆರಾಧ್ಯ ದೈವವಾದ ಕೊರಗಜ್ಜನ ವೇಷ ಭೂಷಣವನ್ನು ಹೋಲುವ ವೇಷ  ಧರಿಸಿ ತಲೆಗೆ ಅಡಿಕೆ ಹಾಳೆಯ ಟೋಪಿ ಹಾಕಿ ಮುಖಕ್ಕೆ ಮಸಿ ಬಳಿದು ಕೊಂಡು  ವರ ಆಗಮಿಸಿದ್ದ ಎನ್ನಲಾಗಿದೆ.

 
 
 
 
 
 
 
 
 
 
 

Leave a Reply