ಯಡಮೊಗೆ ಕೊಲೆ‌ ಪ್ರಕರಣದ ಪ್ರಮುಖ ಆರೋಪಿಗಳಿಬ್ಬರು ಪೊಲೀಸ್ ಕಸ್ಟಡಿಗೆ

ಕುಂದಾಪುರ: ಜಿಲ್ಲೆಯನ್ನೇ ಬೆಚ್ಚಿಬೀಳಿಸಿದ ಸಾಮಾಜಿಕ ಕಾರ್ಯಕರ್ತರಾಗಿ‌ ಗುರುತಿಸಿಕೊಂಡಿದ್ದ ಯಡಮೊಗೆ ಉದಯ್ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಐವರ ಪೈಕಿ ಇಬ್ಬರು ಪ್ರಮುಖ ಆರೋಪಿಗಳನ್ನು ಎರಡು ದಿನ ಪೊಲೀಸ್ ಕಸ್ಟಡಿಗೆ ನೀಡಿ, ಕುಂದಾಪುರದ 1 ನೇ ಹೆಚ್ಚುವರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರಾದ ನಾಗರತ್ನಮ್ಮ ಆದೇಶಿಸಿದ್ದಾರೆ.

ಪ್ರಸ್ತುತ ಪ್ರಾಣೇಶ್ ಯಡಿಯಾಳ ಹಾಗೂ ರಾಜೇಶ್ ಭಟ್’ನನ್ನು ಹಾಗು ಹೆಚ್ಚಿನ ತನಿಖೆಗೆ ಪೊಲೀಸ್ ವಶಕ್ಕೆ  ಜೂ.18 ಸಂಜೆವರೆಗೆ ಕಸ್ಟಡಿಗೆ ನೀಡಲಾಗಿದೆ. ಕೊಲೆ ಪ್ರಕರಣದ ತನಿಖಾಧಿಕಾರಿಯವರು ಹೆಚ್ಚುವರಿ ತನಿಖೆ ಅಗತ್ಯವಿರುವ ಕಾರಣ ಪ್ರಕರಣದ ಆರೋಪಿ ಗಳಿಬ್ಬರನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಕೋರಿದ ಹಿನ್ನೆಲೆ ನ್ಯಾಯಾಲಯದಲ್ಲಿ ಕಾನೂನು‌ ಅಧಿಕಾರಿ (ಕಿರಿಯ) ಮಮ್ತಾಜ್ ಅವರ ಮನವಿ ಆಲಿಸಿದ ನ್ಯಾಯಾಧೀಶರು ಈ ಆದೇಶ ನೀಡಿದ್ದಾರೆ.

ಜೂ.5 ಶನಿವಾರ ರಾತ್ರಿ ವೇಳೆ ಯಡಮೊಗೆ ಗ್ರಾಮಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳ್ ಹಾಗೂ ಆತನ‌ ತಂಡ ಉದಯ್ ಗಾಣಿಗ ಅವರ ಮೈಮೇಲೆ ಕಾರು ಹತ್ತಿಸಿ ಆ ಬಳಿಕ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ ಬಗ್ಗೆ ಉದಯ್ ಗಾಣಿಗಪತ್ನಿ‌ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಕೊಲೆ ಪ್ರಕರಣದ ಪ್ರಮುಖ ಆರೋಪಿ ಯಡಮೊಗೆ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳ ನನ್ನು ಭಾನುವಾರ ನಸುಕಿನ ಜಾವ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. 

ಪ್ರಕರಣದ ಎರಡನೇ ಆರೋಪಿ ರಾಜೇಶ್ ಭಟ್ ಹಾಗೂ ಕೃತ್ಯಕ್ಕೆ ಕುಮ್ಮಕ್ಕು ನೀಡಿದ ಆರೋಪ ದಡಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಬಾಲಚಂದ್ರ ಭಟ್ ಬಂಧನವಾಗಿತ್ತು. ಆರೋಪಿ ಮನೋಜ್ ಕುಮಾರ್ ಹಾಗೂ ಯಡಮೊಗೆ ಪಂಚಾಯತ್ ಸದಸ್ಯ ಸದಾಶಿವ ನಾಯ್ಕ್ ಎನ್ನುವರನ್ನು ಈಗಾಗಲೇ ಬಂಧಿಸಲಾಗಿದೆ.
 
 
 
 
 
 
 
 
 
 
 

Leave a Reply