ಮಾಸ್ಕ್ ಧರಿಸದೆ ಮೆಹಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜಿಲ್ಲಾಧಿಕಾರಿ ಫೋಟೊ~ಅದು ಮನೆಯಲ್ಲಿ ನಡೆದ ಕುಟುಂಬ ಕಾರ್ಯಕ್ರಮ~ ಜಿಲ್ಲಾಧಿಕಾರಿ ಸ್ಪಷ್ಟನೆ

ಎ.24: ಉಡುಪಿ ಜಿಲ್ಲಾ ಹೆಚ್ಚುವರಿ ಎಸ್ಪಿಯ ಮಗಳ ಮೆಹಂದಿ ಕಾರ್ಯ ಕ್ರಮದಲ್ಲಿ ಮಾಸ್ಕ್ ಧರಿಸದೆ ಭಾಗವಹಿಸಿ ಸಾಮಾಜಿಕ ಜಾಲ ತಾಣಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣರಾದ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್, ಈ ಕುರಿತು ಪ್ರತಿಕ್ರಿಯಿಸಿ, ಇದೊಂದು ಮನೆಯಲ್ಲಿ ನಡೆದ ಕುಟುಂಬ ಕಾರ್ಯಕ್ರಮವೇ ಹೊರತು ಸಾರ್ವಜನಿಕ ಕಾರ್ಯಕ್ರಮ ಅಲ್ಲ’ಎಂದು ಹೇಳಿದ್ದಾರೆ.ನನ್ನ ಮನೆಯ ಪಕ್ಕದಲ್ಲಿರುವ ಹೆಚ್ಚುವರಿ ಎಸ್ಪಿ ಮನೆಯಲ್ಲಿ ಅವರ ಮಗಳ ಮೆಹಂದಿ ಕಾರ್ಯ ಕ್ರಮವನ್ನು ಕೇವಲ ನಾಲ್ಕು ಕುಟುಂಬಗಳಿಗೆ ಸೀಮಿತಗೊಳಿಸಿ ವ್ಯವಸ್ಥೆ ಮಾಡಲಾಗಿತ್ತು.

ಅಲ್ಲಿ ಅವರ ಕ್ಲೋಸ್ ಫ್ಯಾಮಿಲಿಯ ಕೆಲವೇ ಕೆಲವು ಮಂದಿ ಸೇರಿದ್ದರು. ಅದು ಸಾರ್ವಜನಿಕ ಸ್ಥಳ ಅಲ್ಲ. ಕಡ್ಡಾಯ ವಾಗಿ ಧರಿಸಬೇಕಾಗಿ ರುವುದು ಸಾರ್ವಜನಿಕ ಸ್ಥಳದಲ್ಲಿ ಮಾತ್ರ ಎಂದು ಜಿಲ್ಲಾಧಿಕಾರಿ ಸ್ಪಷ್ಟನೆ ನೀಡಿದರು.

 
 
 
 
 
 
 
 
 
 
 

1 COMMENT

  1. ಹಾಗಾದರೆ ಸಾಮಾನ್ಯರ ಮನೆಯಲ್ಲಿ ನಡೆಯುವ ಮೆಹಂದಿ, ಸಣ್ಣ ಪುಟ್ಟ ಧಾರ್ಮಿಕ ಕಾರ್ಯಕ್ರಮಗಳು ಅಂತರಾಷ್ಟ್ರೀಯ ಉತ್ಸವಗಳೇ???

Leave a Reply