ದಿನಕ್ಕೆ ಕನಿಷ್ಠ 10,000 ಕೋವಿಡ್ ಟೆಸ್ಟಿಂಗ್ ನಡೆಸಿ : ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ 19 ಹರಡುವುದನ್ನು ನಿಯಂತ್ರಿಸಲು ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಪರೀಕ್ಷೆ ನಡೆಸಿ, ಸೋಂಕಿತರನ್ನು ಬೇಗ ಪತ್ತೆ ಹಚ್ಚುವುದು ಅಗತ್ಯವಿದ್ದು, ಇದಕ್ಕಾಗಿ ಪ್ರತಿ ದಿನ ಕನಿಷ್ಠ 10,000 ರಿಂದ 12,000 ಕೋವಿಡ್ ಪರೀಕ್ಷೆ ನಡೆಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು. ಅವರು ಸೋಮವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣ ಕುರಿತ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇತ್ತೀಚೆಗೆ ಜಿಲ್ಲೆಗೆ ಭೇಟಿ ನೀಡಿದ ಮಾನ್ಯ ಮುಖ್ಯಮಂತ್ರಿಗಳ ಸೂಚನೆಯಂತೆ, ಜಿಲ್ಲೆಯಲ್ಲಿ ಸೋಂಕು ಹರಡುವುದನ್ನು ತಪ್ಪಿಸಲು  ಸೋಂಕಿತರನ್ನು  ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‌ಗಳಿಗೆ ಸ್ಥಳಾಂತರಿಸಬೇಕು.  ವೈದ್ಯಾಧಿಕಾರಿಗಳ ನಿರ್ಧಾರದ ಮೇಲೆ ಹೋಂ ಐಸೋ ಲೇಶನ್ ನಲ್ಲಿರುವ ಸೋಂಕಿತರ ಮನೆಯನ್ನು ಸೀಲ್‌ಡೌನ್ ಮಾಡಿ, ಸುತ್ತ ಮುತ್ತಲಿನ 4 ಮನೆಗಳನ್ನು ಸೇರಿಸಿ ಕಂಟೈನ್‌ಮೆಂಟ್ ಝೋನ್ ಎಂದು ಘೋಷಿಸಿ.
 ಸೋಂಕಿತರು ಮತ್ತು ಅವರ ಸಂಪರ್ಕಿತರು ತಮ್ಮ ಮನೆಯ  ವ್ಯಾಪ್ತಿಯನ್ನು ಬಿಟ್ಟು  ಅನಾವಶ್ಯಕ ಸುತ್ತಾಡುವುದನ್ನು ನಿಯಂತ್ರಿಸಲು ಅಗತ್ಯ ಕ್ರಮಕೈಗೊಳ್ಳಿ, ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್‌ಗೆ  ಸ್ಥಳಾಂತರಿಸುವಾಗ, ಜನರ ಪ್ರತಿರೋಧ ಕಂಡುಬoದಲ್ಲಿ ಪೊಲೀಸ್ ನೆರವು ಪಡೆ ಯುವಂತೆ  ಜಿಲ್ಲೆಯ ಎಲ್ಲಾ ತಾಲೂಕುಗಳ ತಹಸೀಲ್ದಾರ್‌ಗಳು, ತಾ.ಪಂ. ಕಾರ್ಯನಿರ್ವಹಣಾ ಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳಿಗೆ ಹಾಗೂ ಪೊಲೀಸ್ ಇಲಾಖೆಗೆ  ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.

 ಸೋಂಕಿತರು ಕಂಡು ಬರುವ ಗ್ರಾಮಗಳ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು, ಸೋಂಕಿತರ ಮನೆಗೆ  ಖುದ್ದು ಭೇಟಿ ನೀಡಿ, ಅವರ ಆರೋಗ್ಯ ವಿಚಾರಿಸಿ, ಅಗತ್ಯಕನುಗುಣವಾಗಿ ಆಸ್ಪತ್ರೆಗೆ ಅಥವಾ ಕೋವಿಡ್ ಕೇರ್ ಸೆಂಟರ್‌ಗೆ ಸ್ಥಳಾಂತರಿಸುವ ಬಗ್ಗೆ  ಕ್ರಮ ಕೈಗೊಳ್ಳಬೇಕು ಎಂದರು

 
 
 
 
 
 
 
 
 
 
 

Leave a Reply