ರೋಗ ಬಾರದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ, ಏಪ್ರಿಲ್ 13 (ಕವಾ): ಯಾವುದೇ ರೋಗ ಬಂದು ಚಿಕಿತ್ಸೆ ಪಡೆಯುವ ಬದಲು ರೋಗ ಬಾರದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು
ಕೈಗೊಂಡರೆ ರೋಗಗಳಿಂದ ದೂರವಿರಲು ಸಾಧ್ಯ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.
ಅವರು ಇಂದು ನಗರದ ಜಿಲ್ಲಾ ಪಂಚಾಯತ್‌ನ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಡೆಂಗ್ಯೂ ಮತ್ತು
ಮಲೇರಿಯಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಾಮಾನ್ಯವಾಗಿ ಮಳೆಗಾಲದಲ್ಲಿ ಹೆಚ್ಚು ರೋಗಗಳು ಬರುವ ಸಾಧ್ಯತೆ ಹೆಚ್ಚಿದ್ದು, ಮಳೆ ನೀರು ಎಲ್ಲೆಂದರಲ್ಲಿ ನಿಲ್ಲುವುದರಿಂದ ಸೊಳ್ಳೆಗಳು
ಸಂತಾನೋತ್ಪತ್ತಿಗೊಳ್ಳುವುದರೊAದಿಗೆ ಹೆಚ್ಚಿನ ಸೊಳ್ಳೆಗಳು ಉತ್ಪತ್ತಿಯಾಗಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಮತ್ತಿತರ ರೋಗಗಳು
ಹರಡುತ್ತದೆ ಎಂದರು.

ಸೊಳ್ಳೆ ನಿಯಂತ್ರಣಕ್ಕೆ ಎಲ್ಲಾ ರೀತಿಯ ಕಟ್ಟುನಿಟ್ಟಿನ ಕ್ರಮಗಳನ್ನು ಸ್ಥಳೀಯ ಸಂಸ್ಥೆಗಳು ಹಾಗೂ ಆರೋಗ್ಯ ಇಲಾಖೆಗಳು ಕೈಗೊಳ್ಳಬೇಕು. ಈ
ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅಗತ್ಯ ಎಂದರು.
ಬಹು ಮಹಡಿ ಕಟ್ಟಡಗಳ ಮೇಲ್ಛಾವಣಿಗಳಲ್ಲಿ ನೀರಿನ ಟ್ಯಾಂಕ್‌ಗಳನ್ನು ತೆರೆದಿಟ್ಟಿರುವ ಹಿನ್ನೆಲೆ ಅಲ್ಲಿ ಸೊಳ್ಳೆಗಳ ಉತ್ಪತಿ ತಾಣಗಳಾಗಿವೆ.
ನಗರಸಭೆ, ಪುರಸಭೆ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಇವುಗಳ ಪರಿವೀಕ್ಷಣೆ ಮಾಡಿ, ಸಂಬoಧಪಟ್ಟವರಿಗೆ ಇವುಗಳ ನಿಯಂತ್ರಣಕ್ಕೆ
ಸೂಚನೆ ನೀಡುವುದು ಸೂಕ್ತ ಎಂದರು.
ಮಲೇರಿಯಾ, ಡೆಂಗ್ಯೂ ರೋಗಗಳು ಹೆಚ್ಚು ಕಂಡುಬರುವ ಪ್ರದೇಶ ಗುರುತಿಸುವುದರೊಂದಿಗೆ ವಿಶೇಷ ಕಾರ್ಯಕ್ರಮಗಳನ್ನು, ಮನೆ ಮನೆಗೆ ಭೇಟಿ
ನೀಡಿ ಆರೋಗ್ಯ ಶಿಕ್ಷಣ ನೀಡುವುದರೊಂದಿಗೆ ಸೊಳ್ಳೆಗಳ ಉತ್ಪತ್ತಿಯಾಗದಂತೆ ಕ್ರಮ ವಹಿಸಬೇಕು ಎಂದರು.

ಜಿಲ್ಲೆಗೆ ಕಟ್ಟಡ ನಿರ್ಮಾಣ ಹಾಗೂ ಮೀನುಗಾರಿಕೆ ಸೇರಿದಂತೆ ಮತ್ತಿತರ ಕಾರ್ಯಗಳಿಗೆ ಹೊರ ರಾಜ್ಯಗಳಿಂದ ಕಾರ್ಮಿಕರು ಹಾಗೂ ಪ್ರವಾಸಿ
ತಾಣಗಳನ್ನು ವೀಕ್ಷಿಸಲು ಸಹ ಹೆಚ್ಚು ಜನರು ಹೊರಗಿನಿಂದ ಬರುತ್ತಾರೆ. ಹಾಗಾಗಿ ಇದರಿಂದ ರೋಗಗಳು ಹರಡುವ ಸಾಧ್ಯತೆ ಇದ್ದು, ಇದರಿಂದ
ಎಚ್ಚರ ವಹಿಸುವುದು ಅಗತ್ಯ ಎಂದರು.
ಡೆಂಗ್ಯೂ, ಮಲೇರಿಯಾ, ಕೀಟಜನ್ಯ ರೋಗಗಳ ಸಾಮಾನ್ಯ ಲಕ್ಷಣಗಳು ಕಂಡುಬAದಲ್ಲಿ ಅವರುಗಳಿಗೆ ಆರೋಗ್ಯ ತಪಾಸಣೆ ನಡೆಸಿ, ರೋಗಗಳನ್ನು
ಗುರುತಿಸಿ, ಚಿಕಿತ್ಸೆ ನೀಡುವುದರೊಂದಿಗೆ ರೋಗ ಹರಡುವುದನ್ನು ತಡೆಯಲು ಸಾಧ್ಯ ಎಂದರು.

ಕಳೆದ ವರ್ಷಗಳಲ್ಲಿ ಮಲೇರಿಯಾ, ಡೆಂಗ್ಯೂ ಪ್ರಕರಣ ನಗರ ಪ್ರದೇಶಗಳಲ್ಲಿ ಹಾಗೂ ಕೊಲ್ಲೂರು ವ್ಯಾಪ್ತಿಯಲ್ಲಿ ಹೆಚ್ಚು ಪ್ರಕರಣಗಳು
ಕಂಡುಬAದಿದೆ. ಇವುಗಳ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮ ವಹಿಸಿ, ಪ್ರಕರಣಗಳು ಆಗದಂತೆ ತಡೆಯಬೇಕು ಎಂದರು.

ತಂಬಾಕು ಉತ್ಪನ್ನ ದುಷ್ಪರಿಣಾಮ ಕುರಿತು ಅರಿವು ಮೂಡಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ, ಏಪ್ರಿಲ್ 13 (ಕವಾ): ತಂಬಾಕು ಉತ್ಪನ್ನಗಳ ಸೇವನೆಯಿಂದ ಮಾರಣಾಂತಿಕ ಕಾಯಿಲೆಗಳಾದ ಕ್ಯಾನ್ಸರ್, ಹೃದಯ ರೋಗದಂತಹ
ಕಾಯಿಲೆಗಳು ಬರುವ ಸಾಧ್ಯತೆ ಇರುವ ಹಿನ್ನೆಲೆ, ಸಾರ್ವಜನಿಕರಿಗೆ ಈ ಬಗ್ಗೆ ಅರಿವು ಮೂಡಿಸಿ, ಇವುಗಳಿಂದ ದೂರ ಉಳಿಯುವಂತೆ ಮಾಡಬೇಕು
ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.
ಅವರು ಇಂದು ನಗರದ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ತ್ರೆöÊಮಾಸಿಕ ಸಭೆಯ ಅಧ್ಯಕ್ಷತೆ
ವಹಿಸಿ ಮಾತನಾಡಿದರು.

ಹೆಚ್ಚಾಗಿ ಯುವಜನರು ತಂಬಾಕು ಉತ್ಪನ್ನಗಳ ಸೇವನೆ ಮಾಡುತ್ತಿರುವುದು ಕಂಡು ಬರುತ್ತಿದೆ. ಮಣಿಪಾಲ್ ಭಾಗದಲ್ಲಿ ಇವುಗಳ ಬಳಕೆ ಹಾಗೂ
ಮಾರಾಟ ಹೆಚ್ಚಿದೆ. ಈ ಬಗ್ಗೆ ಹೆಚ್ಚು ಹೆಚ್ಚು ದಾಳಿಗಳನ್ನು ನಡೆಸುವುದರೊಂದಿಗೆ ಕೋಟ್ಪಾ ಕಾಯಿದೆ ಪರಿಣಾಮಕಾರಿಯಾಗಿ
ಅನುಷ್ಠಾನಗೊಳಿಸಬೇಕು ಎಂದರು.
ತಂಬಾಕು ನಿಯಂತ್ರಣಕ್ಕೆ ವಿಶೇಷ ಅಭಿಯಾನಗಳನ್ನು ಹಾಗೂ ದಾಳಿಗಳನ್ನು ನಡೆಸಬೇಕು. ಶಾಲಾ-ಕಾಲೇಜುಗಳಲ್ಲಿ ಇವುಗಳ ಸೇವನೆಗಳಿಂದ
ಉಂಟಾಗುವ ದುಷ್ಪರಿಣಾಮಗಳ ಅರಿವು ಮೂಡಿಸಿ, ಇವುಗಳಿಂದ ದೂರ ಇರುವಂತೆ ಮಾಡಬೇಕು ಎಂದರು.
ತಾಲೂಕು ಮಟ್ಟದಲ್ಲಿ ಕೋಟ್ಪಾ ತನಿಖಾ ದಾಳಿ ಹಾಗೂ ತ್ರೆöÊಮಾಸಿಕ ಸಮನ್ವಯ ಸಮಿತಿ ಸಭೆಗಳನ್ನು ನಡೆಸುವುದರೊಂದಿಗೆ ಕೋಟ್ಪಾ
ಕಾಯಿದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದರು.
ಶಾಲಾ-ಕಾಲೇಜುಗಳೂ ಸೇರಿದಂತೆ ಶಿಕ್ಷಣ ಸಂಸ್ಥೆಗಳ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಂತೆ ನಿಷೇಧಿಸಬೇಕು.
ಒಂದೊಮ್ಮೆ ಇದನ್ನು ಉಲ್ಲಂಘಿಸಿದ್ದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಡಬೇಕು ಎಂದರು.
ಉಡುಪಿ ತಾಲೂಕಿನ ಕೋಡಿಬೆಂಗ್ರೆ, ಕುಂದಾಪುರದ ಬೀಜೂರು ಗ್ರಾಮಗಳು ತಂಬಾಕು ಮುಕ್ತ ಗ್ರಾಮಗಳೆಂದು ತೋರಿಸಲು ಸರ್ವೇ ಕಾರ್ಯಗಳನ್ನು
ಗ್ರಾಮ ಪಂಚಾಯತ್ ಮೂಲಕ ಮಾಡಿಸಿ, ಘೋಷಿಸಬೇಕು ಎಂದರು.

 
 
 
 
 
 
 
 
 
 
 

Leave a Reply