Janardhan Kodavoor/ Team KaravaliXpress
25.6 C
Udupi
Sunday, July 3, 2022
Sathyanatha Stores Brahmavara

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625 ರ ಸಾಧನೆಯನ್ನು ಮಾಡಿದ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಯಿಂದ ಸನ್ಮಾನ

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625 ರ ಸಾಧನೆಯನ್ನು ಮಾಡಿದ ಸರಕಾರಿ ಪದವಿ ಪೂರ್ವ ಕಾಲೇಜು, ಮಲ್ಪೆ ಇಲ್ಲಿಯ ಪುನೀತ್ ನಾಯಕ್ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜು ಉಡುಪಿ ಇಲ್ಲಿಯ ಗಾಯತ್ರಿ ಹಾಗೂ ಸರಕಾರಿ ಪ್ರೌಢಶಾಲೆ ಕಾಳಾವರ ಇಲ್ಲಿಯ ನಿಶಾ ಇವರನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾನ್ಯ ಜಿಲ್ಲಾಧಿಕಾರಿಗಳು ಸನ್ಮಾನವನ್ನು ಮಾಡಿದರು. ವೈದ್ಯರಾಗುವ, ಐಎಎಸ್ ಮಾಡುವ ಕನಸುಗಳನ್ನು ಹೊತ್ತ ಈ ಪ್ರತಿಭಾವಂತ ಯುವ ಪ್ರತಿಭೆಗಳಿಗೆ ಸೂಕ್ತ ಮಾರ್ಗದರ್ಶನವನ್ನು ಜಿಲ್ಲಾಧಿಕಾರಿ ಕೂರ್ಮರಾವ್ ನೀಡಿದರು. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ, ಉಪನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ ಗೋವಿಂದ ಮಡಿವಾಳ, ಶ್ರೀಮತಿ ಜಾನ್ಹವಿ ಶಿಕ್ಷಣಾಧಿಕಾರಿಗಳು, ಡಾಕ್ಟರ್ ಅಶೋಕ ಕಾಮತ್, ಕ್ಷೇತ್ರ ಶಿಕ್ಷಣಾಧಿಕಾರಿ ಅವರು ಉಪಸ್ಥಿತರಿದ್ದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!