ಕೇಂದ್ರ ನಡೆಸಿದ ಮಾತುಕತೆ ವಿಫಲ: ಡಿ.8ರಂದು ಭಾರತ್ ಬಂದ್ ಗೆ ರೈತರ ಕರೆ

ನವದೆಹಲಿ: ರೈತರು ನೂತನ ಕೃಷಿ ಕಾಯಿದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಸೂಕ್ತ ರೀತಿಯಲ್ಲಿ ಕೇಂದ್ರ ಸರ್ಕಾರ ಪ್ರತಿಕ್ರಿಯಿಸದ ಹಿನ್ನೆಲೆ ತಮ್ಮ ಹೋರಾಟವನ್ನು ಮತ್ತಷ್ಟು ಬಲಪಡಿಸಲು ರೈತರು ನಿರ್ಧರಿಸಿದ್ದು, ಡಿಸೆಂಬರ್ 8 ರಂದು ಭಾರತ್ ಬಂದ್ ಗೆ ಕರೆ ನೀಡಿದ್ದಾರೆ.

ರೈತ ಸಂಘಟನೆಗಳ ಮುಖಂಡರು, ಸಿಂಘು ಗಡಿಯಲ್ಲಿ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಹೊಸ ಕೃಷಿ ಕಾಯಿದೆಗಳ ಬಗ್ಗೆ ನಮಗೆ ತೃಪ್ತಿ ಇಲ್ಲ. ಇತ್ತೀಚಿಗೆ ಜಾರಿಗೆ ತಂದ ಮೂರು ಕಾಯಿದೆಗಳನ್ನು ಸರ್ಕಾರ ಹಿಂಪಡೆಯಬೇಕು ಎಂದು ಒತ್ತಾಯ ಮಾಡಿದ್ದಾರೆ.

ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ಸರ್ಕಾರಕ್ಕೆ ತಿಳಿಸಿದ್ದೇವೆ. ಡಿಸೆಂಬರ್ 8 ರಂದು ನಾವು ಭಾರತ್ ಬಂದ್‌ಗೆ ಕರೆ ನೀಡಿದ್ದೇವೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ ಈಗಾಗಲೇ ಪ್ರತಿಭಟನಾ ನಿರತ ರೈತರೊಂದಿಗೆ ಎರಡು ಬಾರಿ ನಡೆಸಿದ ಮಾತುಕತೆಯೂ ವಿಫಲವಾಗಿದೆ. ಹಾಗಾಗಿ ನಾಳೆ ಮತ್ತೊಂದು ಸುತ್ತಿನ ಮಾತುಕತೆಗೆ ಆಹ್ವಾನಿಸಲಾಗಿದ್ದು, ಇದರ ಬೆನ್ನಲ್ಲೇ ರೈತ ಸಂಘಟನೆಗಳು ಡಿಸೆಂಬರ್ 8 ರಂದು ಭಾರತ್ ಬಂದ್ ಗೆ ಕರೆ ನೀಡಿವೆ.

ಈಗಾಗಲೇ ಪಶ್ಚಿಮ ಉತ್ತರ ಪ್ರದೇಶದ ವಿವಿಧ ಜಿಲ್ಲೆಗಳ ರೈತರು ದೆಹಲಿ-ನೊಯ್ಡಾ ಗಡಿ ಭಾಗದಲ್ಲಿ ಜಮಾಯಿಸಿದ್ದು ಪ್ರತಿಭಟನೆಯಲ್ಲಿ ನಿರತರಾಗಿದ್ದಾರೆ. ಬೇರೆ ರಾಜ್ಯದ ರೈತರು ದೆಹಲಿಯಲ್ಲಿ ಹರಿಯಾಣ-ಪಂಜಾಬ್ ರೈತರು ಆರಂಭಿಸಿರುವ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ರಾಜಧಾನಿಗೆ ಹೊರಟಿದ್ದು, ಈ ಹಿನ್ನೆಲೆಯಲ್ಲಿ ಹಲವು ರಾಷ್ಟ್ರೀಯ ಹೆದ್ದಾರಿಗಳನ್ನು ಮುಚ್ತಲಾಗಿದೆ.

 
 
 
 
 
 
 
 
 

Leave a Reply