Janardhan Kodavoor/ Team KaravaliXpress
26.6 C
Udupi
Thursday, August 11, 2022
Sathyanatha Stores Brahmavara

ದೇರೆಬೈಲ್ ನೈರುತ್ಯ ವಾರ್ಡಿನಲ್ಲಿ ರಸ್ತೆ ಉದ್ಘಾಟಿಸಿದ ಶಾಸಕ ಕಾಮತ್

ಮಂಗಳೂರು ಮಹಾನಗರ ಪಾಲಿಕೆಯ ದೇರೆಬೈಲ್ ನೈರುತ್ಯ ವಾರ್ಡಿನ ಕಲ್ಲಾವುನಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅನುದಾನದಡಿ ನಿರ್ಮಾಣಗೊಂಡ ರಸ್ತೆ ಕಾಂಕ್ರೀಟೀಕರಣ ಹಾಗೂ ಸೇತುವೆಯನ್ನು ಮಂಗಳೂರು ನಗರ ದಕ್ಷಿಣ ಶಾಸಕರಾದ ಡಿ.ವೇದವ್ಯಾಸ್ ಕಾಮತ್ ಹಾಗೂ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅದ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಅವರು ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಶಾಸಕ ಕಾಮತ್, ದೇರೆಬೈಲ್ ನೈರುತ್ಯ ವಾರ್ಡಿನ ಕಲ್ಲಾವು ರಸ್ತೆ ಹಾಗೂ ಸೇತುವೆ ನಿರ್ಮಾಣದಿಂದ ಈ ಪರಿಸರದ ಜನರಿಗೆ ಬಹಳಷ್ಟು ಉಪಕಾರವಾಗಿದೆ. ಈ ಹಿಂದೆ ಇಲ್ಲಿಗೆ ಭೇಟಿ ನೀಡಿದ್ದ ವೇಳೆ ರಸ್ತೆ ಹದಗೆಟ್ಟಿರುವ ವಿಚಾರವಾಗಿ ಸ್ಥಳೀಯ ಮುಖಂಡರು ಮನವಿ ಸಲ್ಲಿಸಿದ್ದರು.

ಹಾಗಾಗಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಸಹಕಾರದಿಂದ ಅನುದಾನ ಬಿಡುಗಡೆಗೊಳಿಸಲಾಗಿತ್ತು. ಇಂದು ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಗೊಳಿಸಲಾಯಿತು. ಕಾಮಗಾರಿಯ ವೇಳೆ ಸ್ಥಳೀಯರ ಸಹಕಾರಕ್ಕಾಗಿ ಧನ್ಯವಾದ ಅರ್ಪಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಸ್ಥಳೀಯ ಮನಪಾ ಸದಸ್ಯರಾದ ಗಣೇಶ್ ಕುಲಾಲ್,ಜಯಲಕ್ಷ್ಮೀ ವಿ ಶೆಟ್ಟಿ, ಜಿಲ್ಲಾ ವಕ್ತಾರ ರಾಧಾಕೃಷ್ಣ, ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷ ರಾಕೇಶ್ ಸಾಲ್ಯಾನ್, ಕಾರ್ಯದರ್ಶಿ ಗೌತಮ್ ಸಾಲ್ಯಾನ್ ಕೊಡಿಕಲ್, ಮಂಡಲ ಸದಸ್ಯ ಅರುಣ್ ಉರ್ವಾ, ವಾರ್ಡ್ ಪ್ರಮುಖ ನಿತಿನ್, ರಜತ್ ಕುಲಾಲ್, ವಿಜಯ್ ಉರ್ವಾ ಹಾಗೂ ಸ್ಥಳೀಯಶೈಲೇಶ್ ದೇವಾಡಿಗ, ಗುತ್ತಿಗೆದಾರ ಲಿಯಾಕತ್, ಆಸಿಫ್ ಪಕ್ಷದ ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!