ನಾಳೆ ಐಜಿಯಾಗಿ ಪದೋನ್ನತಿ ಹೊಂದಬೇಕಿದ್ದ ಅಧಿಕಾರಿ ಆರ್. ದಿಲೀಪ್ ನಿಧನ ಇಂದು ನಿಧನ

ಬೆಂಗಳೂರು: ಐಪಿಎಸ್ ಅಧಿಕಾರಿ ಆರ್, ದಿಲೀಪ್ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ. ಅವರಿಗೆ 53 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಯಲ್ಲಿ ಶುಕ್ರವಾರ ಇಹಲೋಕ ತ್ಯಜಿಸಿದರು 

ಆರ್. ದಿಲೀಪ್ ಸಿಐಡಿ ವಿಭಾಗದ ಡಿಐಜಿಪಿ ಆಗಿ  ಕಾರ್ಯ ನಿರ್ವಹಿಸುತ್ತಿದ್ದರು. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು. ಇದೀಗ ಚಿಕಿತ್ಸೆ ಫಲಿಸದೆ ತಮ್ಮ 53ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.

ಬಿಇ ಪದವೀಧರರಾಗಿದ್ದ ಅವರು, 2005ರಲ್ಲಿ ಪೊಲೀಸ್ ಸೇವೆಗೆ ಸೇರ್ಪಡೆಗೊಂಡಿದ್ದರು. ಧಾರವಾಡ, ಉತ್ತರ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಎಸ್ಪಿ ಆಗಿ ಸೇವೆ ಸಲ್ಲಿಸಿದ್ದರು. ಹುಬ್ಬಳ್ಳಿ-ಧಾರವಾಡ ಕಮಿಷನರ್ ಆಗಿಯೂ ಅವರು ಸೇವೆ ಸಲ್ಲಿಸಿದ್ದಾರೆ. ಆರ್. ದಿಲೀಪ್ ಸಿಐಡಿ ಆರ್ಥಿಕ ಅಪರಾಧ ವಿಭಾಗದ ಡಿಐಜಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.

 
 
 
 
 
 
 
 
 
 
 

Leave a Reply