ಡಿಕೆಶಿ~ಪ್ರಮೋದ್ ಬೇಟಿ, ಕಾಂಗ್ರೆಸ್ ವಲಯದಲ್ಲಿ ತೀವ್ರ ಕುತೂಹಲ

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಭೇಟಿ ಮಾಡಿ, ಸಮಾಲೋಚನೆ ನಡೆಸಿದರು.

ನವೆಂಬರ್ 29 ರಂದು ಉಡುಪಿಯಲ್ಲಿ ಡಿ‌ ಕೆ ಶಿವಕುಮಾರ್ ಉಪಸ್ಥಿತಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾಜಿ ಸಚಿವ ಹಾಗೂ ಉಡುಪಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಪ್ರಭಾವಿ ಮುಖಂಡ ಪ್ರಮೋದ್ ಮಧ್ವರಾಜ್ ಅವರ ಅನುಪಸ್ಥಿತಿ ಎದ್ದು ಕಾಣುತ್ತಿತ್ತು.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅಂದು ತಮ್ಮ ಮಾತಿನಲ್ಲಿ ಪಕ್ಷದ ಹಿತದೃಷ್ಟಿಯಿಂದ ಯಾವುದೇ ಸಮಸ್ಯೆ ಇದ್ದರೆ ಅದನ್ನು ಬಗೆಹರಿಸಲು ಎಲ್ಲಾ ನಾಯಕರು ಮೊದಲ ಆದ್ಯತೆ ನೀಡುವ ಮೂಲಕ ಪಕ್ಷವನ್ನು ಬಲಪಡಿಸಲು ಮುಂದಾಗಬೇಕು ಎಂದು ಹೇಳಿದ್ದರು.

ಇಂದು ಉಭಯ ನಾಯಕರ ನಡುವಿನ ಭೇಟಿ ಉಡುಪಿ ಕಾಂಗ್ರೆಸ್ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

 
 
 
 
 
 
 
 
 
 
 

Leave a Reply