ದುರ್ಗಾ ದೌಡ್‌ ಕಾರ್ಯಕ್ರಮದಲ್ಲಿ ಕೋವಿಡ್‌ ನಿಯಮ ಉಲ್ಲಂಘನೆ

ಉಡುಪಿ: ನಗರದಲ್ಲಿ ವಿಜಯ ದಶಮಿಯ ಪ್ರಯುಕ್ತ ಹಿಂದು ಜಾಗರಣಾ ವೇದಿಕೆಯಿಂದ ಆಯೋಜಿಸಲಾಗಿದ್ದ ದುರ್ಗಾ ದೌಡ್‌ ಕಾರ್ಯಕ್ರಮದಲ್ಲಿ ಕೋವಿಡ್‌ ನಿಯಮ ಉಲ್ಲಂಘನೆ ಮಾಡಿರುವ ಕುರಿತು ಪ್ರಕರಣ ದಾಖಲಾಗಿದೆ.

ಅಕ್ಟೋಬರ್‌ 15ರಂದು ಸಂಜೆ ಉಡುಪಿ ಹಿಂದೂ ಜಾಗರಣಾ ವೇದಿಕೆ ಸಂಘಟನೆಯ ಕಾರ್ಯಕರ್ತರು ಯಾವುದೇ ಪೂರ್ವಾನುಮತಿಯಿಲ್ಲದೆ ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದಿಂದ ಅಂಬಲಪಾಡಿ ಮಹಾಕಾಳಿ ಅಮ್ಮನವರ ಸನ್ನಿಧಾನದವರೆಗೆ ಪಾದಯಾತ್ರೆಯನ್ನು ನಡೆಸಿ ಕೋವಿಡ್‌-19 ಸೋಂಕು ಹರಡುವುದನ್ನು ತಡೆಗಟ್ಟುವ ಬಗ್ಗೆ ಸರಕಾರ/ಜಿಲ್ಲಾಧಿಕಾರಿಯವರ ಆದೇಶವನ್ನು ಪಾಲನೆ ಮಾಡದೆ, ಆದೇಶವನ್ನು ಉಲ್ಲಂಘನೆ ಮಾಡಿರುತ್ತಾರೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 152/2021 ಕಲಂ: 188, 269 IPC & ಕಲಂ: 5(1), 5(4) The Karnataka Epidemic Diseases Act 2020 ರಂತೆ ಪ್ರಕರಣ ದಾಖಲಿಸಲಾಗಿದೆ.

 
 
 
 
 
 
 
 
 
 
 

Leave a Reply