ಮದುವೆ ಮನೆಯಲ್ಲಿ ಸೂತಕ!

 ಮದುವೆಯ ವೇಳೆ ಮನೆಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, 60 ಮಂದಿ ಗಾಯಗೊಂಡ ಘಟನೆ ರಾಜಸ್ಥಾನದ ಜೋಧ್‌ಪುರದಲ್ಲಿ ಗುರುವಾರ ನಡೆದಿದೆ. ಮದುವೆ ಔತಣಕ್ಕೆ ಸಿದ್ಧತೆ ನಡೆಸುತ್ತಿದ್ದ ಗ್ಯಾಸ್ ಸಿಲಿಂಡರ್ ಒಂದರಲ್ಲಿ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹನ್ನೆರಡು ಮಂದಿಗೆ ಗಂಭೀರ ಸುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ.

ಜೋಧಪುರದಿಂದ ಸುಮಾರು 60 ಕಿಮೀ ದೂರದಲ್ಲಿರುವ ಭುಂಗ್ರಾ ಗ್ರಾಮದಲ್ಲಿ ಈ ಘಟನೆ ನಡೆದಿದೆ.

 
 
 
 
 
 
 
 
 
 
 

Leave a Reply