ದಕ-ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ~ ಪ್ರತಿಭಾ ಪುರಸ್ಕಾರ ಮತ್ತು ಅಭಿನಂಧನಾ ಸಮಾರಂಭ

ಉಡುಪಿ: ದಕ್ಷಿಣಕನ್ನಡ – ಉಡುಪಿ ಜಿಲ್ಲಾ ಸಹದಕ-ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ವತಿಯಿಂದ ವರ್ಷದ ಸಾಮಾಜಿಕ ಸೇವಾ ಕಾರ್ಯಕ್ರಮಗಳ ಅಂಗವಾಗಿ ಪ್ರತಿಭಾ ಪುರಸ್ಕಾರ ಮತ್ತು ಅಭಿನಂಧನಾ ಸಮಾರಂಭ ಕಾರ್ಯಕ್ರಮ ಶನಿವಾರ ಮಲ್ಪೆಯ ಏಳೂರು ಮೊಗವೀರ ಭವನದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಅವರು ಉದ್ಘಾಟಿಸಿ, ಕೊರೋನಾದಿಂದ ಇಡೀ ಮಾನವ ಕುಲವೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಅದರಲ್ಲೂ ಬಡ ಕುಟುಂಬಗಳ ನೂರಾರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಭವಿಷ್ಯವೇ ಸಂಕಷ್ಟದಲ್ಲಿದೆ. ಇಂತಹ ಸಂದರ್ಭದಲ್ಲಿ ಮೀನುಗಾರಿಕಾ ಫೆಡರೇಶನ್ ಇಷ್ಟು ಸಂಖ್ಯೆಯ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ಮಾಡುತ್ತಿರುವುದು ಶ್ಲಾಘನೀಯವಾಗಿದೆ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಫೆಡರೇಶನ್ ಅಧ್ಯಕ್ಷ ಯಶಪಾಲ್ ಸುವರ್ಣ ಅವರು, ಫೆಡರೇಶನ್ ಕಳೆದ 11 ವರ್ಷಗಳಿಂದ 13,000 ಮಂದಿಗೆ ವಿದ್ಯಾರ್ಥಿವೇತನ ಹಾಗೂ 5000 ಮಂದಿಗೆ ಹೆಲ್ತ್ ಕಾರ್ಡ್ ಗಳನ್ನು ವಿತರಿಸಿದೆ. ಇಂದಿನ ಕಾರ್ಯಕ್ರಮದಲ್ಲಿ 750 ವಿದ್ಯಾರ್ಥಿಗಳಿಗೆ 25 ಲಕ್ಷ  ಪ್ರೋತ್ಸಾಹಧನ ಮತ್ತು 308 ಬೋಟು ಮಾಲಕರಿಗೆ 1 ಕೋಟಿ ರು. ಸಹಾಯಧನ ವಿತರಿಸುವ ಯೋಜನೆಯನ್ನು ಹಾಕಿಕೊಳ್ಳಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ, ಸ್ಥಳೀಯ ನೂತನ ಜನಪ್ರತಿನಿಧಿಗಳಿಗೆ ಅಭಿನಂದನೆ ಮತ್ತು ಸಮಾಜ ಸೇವಕರಿಗೆ ಸನ್ಮಾನ ಕೂಡ ನಡೆಯಿತು. 

ಕಾರ್ಯಕ್ರಮದಲ್ಲಿ ಮೊಗವೀರ ಮಹಾಸಭಾದ ಅಧ್ಯಕ್ಷ ಜಯ ಸಿ.ಕೋಟ್ಯಾನ್, ಮೊಗವೀರ ಯುವ ಸಂಘಟನೆಯ ಅಧ್ಯಕ್ಷ ಶಿವರಾಮ ಕುಂದರ್, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಕೃಷ್ಣ ಸುವರ್ಣ, ಮತ್ಸ್ಯೋದ್ಯಮಿಗಳಾದ ಸಾಧು ಸಾಲ್ಯಾನ್ ಮತ್ತು ಆನಂದ ಸುವರ್ಣ, ಹಸಿ ಮೀನು ಮಾರಾಟಗಾರರ ಸಂಘದ ಅದ್ಯಕ್ಷೆ ಬೇಬಿ ಸಾಲ್ಯಾನ್, ಮಲ್ಪೆ ಮಹಿಳಾ ಮೀನುಗಾರರ ಸಂಘದ ಅಧ್ಯಕ್ಷೆ ಜಲಜಾ ಕೋಟ್ಯಾನ್, ನ್ಯಾಯವಾದಿ ಮಂಜುನಾಥ ಎಸ್.ಕೆ. ಮುಂತಾದವರು ವೇದಿಕೆಯಲ್ಲಿದ್ದರು.

ಮಟ್ಟಾರು ರತ್ನಾಕರ ಹೆಗ್ಡೆ, ರಾಘುವೇಂದ್ರ ಕಿಣಿ, ತಾಪಂ ಅದ್ಯಕ್ಷೆ ಸಂಧ್ಯಾ ಕಾಮತ್, ಉಪಾಧ್ಯಕ್ಷ ಶರತ್ ಕೋಟ್ಯಾನ್, ನಗರಸಭೆ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್, ಸದಸ್ಯರಾದ ಎಡ್ಲಿನ್ ಕರ್ಕಡ, ವಿಜಯ ಕೊಡವೂರು, ಸುಂದರ ಕಲ್ಮಾಡಿ ಮುಂತಾದವರು ಅಭಿನಂದಿಸಲಾಯಿತು. ಮುಳುಗುತಜ್ಞ ಈಶ್ವರ ಬಲರಾಮ ನಗರ ಅವರನ್ನು ಗೌರವಿಸಲಾಯಿತು.

 
 
 
 
 
 
 
 
 
 
 

Leave a Reply