ಫ್ಲಿಪ್‌ಕಾರ್ಟ್ ಮಹಿಳಾ ಉದ್ಯೋಗಿಯನ್ನು ಗುಂಡಿಕ್ಕಿ ಕೊಲೆ

ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಫ್ಲಿಪ್‌ಕಾರ್ಟ್ ಉದ್ಯೋಗಿಯನ್ನು ಅಪರಿಚಿತರು ಗುಂಡಿಕ್ಕಿ ಕೊಂದಿದ್ದಾರೆ. ದೆಹಲಿಯ ಪಶ್ಚಿಮ ವಿಹಾರದಲ್ಲಿ ಸೋಮವಾರ ಸಂಜೆ 7:30ರ ವೇಳೆಗೆ (ಜ.30) ಈ ಘಟನೆ ನಡೆದಿದೆ.

ಫ್ಲಿಪ್‌ಕಾರ್ಟ್‌ನ ಕೊರಿಯರ್ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ವಿವಾಹಿತ ಮಹಿಳೆ ಜ್ಯೋತಿ ಕೆಲಸ ಮುಗಿಸಿ ಸ್ಕೂಟರ್‌‌ನಲ್ಲಿ ಮನೆಗೆ ಬರುತ್ತಿದ್ದ ವೇಳೆ ಬೈಕ್‌ ಹಾಗೂ ಸ್ಕೂಟಿಯಲ್ಲಿ ಬಂದ ದುಷ್ಕರ್ಮಿಗಳು ಜ್ಯೋತಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಗಂಭೀರ ಗಾಯಗೊಂಡ ಜ್ಯೋತಿ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಲಿಲ್ಲ. ಮೃತ ಮಹಿಳೆಗೆ ಪತಿ ಹಾಗೂ ಮೂವರು ಮಕ್ಕಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply