ವಿಶ್ವ ಮೀನುಗಾರಿಕಾ ದಿನಾಚರಣೆ, ಕಣ್ಮರೆಯಾದ ಸುವರ್ಣ ತ್ರಿಭುಜ ಬೋಟಿನ ಮೀನುಗಾರರಿಗೆ ಹೆಚ್ಚುವರಿ ಪರಿಹಾರ, ಮುಖ್ಯ ಮಂತ್ರಿಗಳಿಗೆ ಕೃತಜ್ಞತೆ.

ಕಳೆದ ಮೂರು ವರ್ಷಗಳ ಹಿಂದೆ ಏಳು ಮಂದಿ ಮೀನುಗಾರರೊಂದಿಗೆ ನಿಗೂಢವಾಗಿ ಕಣ್ಮರೆಯಾದ ಸುವರ್ಣ ತ್ರಿಭುಜ ಮೀನುಗಾರಿಕಾ ಬೋಟಿನಲ್ಲಿದ ಏಳು ಮಂದಿ ಮೀನುಗಾರರ ಕುಟುಂಬಗಳಿಗೆ ತಲಾ ಹತ್ತು ಲಕ್ಷ ರೂಪಾಯಿಗಳ ಹೆಚ್ಚುವರಿ ಪರಿಹಾರದ ಚೆಕ್ಕನ್ನು ಮಾನ್ಯ ಮುಖ್ಯಮಂತ್ರಿ ಗಳಾದ ಯಡಿಯೂರಪ್ಪನವರು ವಿಶ್ವ ಮೀನುಗಾರಿಕಾ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ವಿಧಾನ ಸೌಧದಲ್ಲಿ ನಡೆದ ಸಮಾರಂಭದಲ್ಲಿ ವಿತರಿಸಿದರು.ಅದಕ್ಕಾಗಿ ಮಾನ್ಯ ಮುಖ್ಯ ಮಂತ್ರಿಗಳಾದ ಯಡಿಯೂರಪ್ಪನವರಿಗೆ ದ ಕ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ ರವರ ನಿಯೋಗ ಮುಖತ ಭೇಟಿಯಾಗಿ ಕೃತಜ್ಞತೆ ಸಲ್ಲಿಸಿರುತ್ತಾರೆ. ಈ ಹಿಂದೆ ಕರಾವಳಿ ಕರ್ನಾಟಕದ ಮೀನುಗಾರರ ಮುಖಂಡರಾದ ನಾಡೋಜ ಡಾ ಜಿ ಶಂಕರ್ ರವರು ಮಾನ್ಯ ಮುಖ್ಯ ಮಂತ್ರಿಗಳನ್ನು ಭೇಟಿಯಾಗಿ ಬಡ ಮೀನುಗಾರರ ಕುಟುಂಬಗಳಿಗೆ ಹೆಚ್ಚುವರಿ ಪರಿಹಾರವನ್ನು ನೀಡುವಂತೆ ಅಗ್ರಹಿಸಿದ್ದರು, ಅದರ ಪರಿಣಾಮ ಮುಖ್ಯಮಂತ್ರಿಗಳು ನೀಡಿದ ಬರವಸೆಯನ್ನು ಈಡೇರಿಸುವ ಮೂಲಕ ಮೀನುಗಾರರ ಪಾಲಿಗೆ ನುಡಿದಂತೆ ನಡೆದ ಮುಖ್ಯಮಂತ್ರಿಗಳಾಗಿದ್ದಾರೆ.ಬಡ ಮೀನುಗಾರರಿಗೆ ಹೆಚ್ಚುವರಿ ಪರಿಹಾರ ದೊರಕಿಸಿಕೊಡುವಲ್ಲಿ ಅವಿರತ ಪ್ರಯತ್ನ ನಡೆಸಿದ ಕರಾವಳಿ ಕರ್ನಾಟಕದ ಮೀನುಗಾರರ ಮುಖಂಡ ನಾಡೋಜ ಡಾ ಜಿ ಶಂಕರ್, ಮೀನುಗಾರಿಕಾ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಕ್ಷೇತ್ರದ ಶಾಸಕ ರಘುಪತಿ ಭಟ್, ಮೀನುಮಾರಾಟ ಫೆಡರೇಷನ್ ಅಧ್ಯಕ್ಷ ಯಶಪಾಲ್ ಎ ಸುವರ್ಣ ಮತ್ತು ಎಲ್ಲಾ ಜನಪ್ರತಿನಿದಿನಗಳಿಗೆ ದ. ಕ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ ಬೆಳ್ಳಂಪಳ್ಳಿ ಕೃತಜ್ಞತೆ ಸಲ್ಲಿಸಿರುತ್ತಾರೆ. ಈ ಸಂದರ್ಭದಲ್ಲಿ ರವೀಂದ್ರ ಶ್ರೀಯಾನ್, ಶೈಲೇಶ್ ಉಡುಪಿ, ಸತೀಶ್ ಪುತ್ರನ್ ದೊಡ್ಡಣ್ಣ ಗುಡ್ಡೆ ಉಪಸ್ಥಿತರಿದ್ದರು.

 
 
 
 
 
 
 
 
 

Leave a Reply