ನಿರಂತರ ಗ್ಯಾಂಗ್ ವಾರ್ ಗೆ ಬೆಚ್ಚಿದ ಉಡುಪಿ ಜನತೆ

ಪುಂಡರ ಅಟ್ಟಹಾಸಕ್ಕೆ ಭಯಭೀತರಾದ ಜನ ಉಡುಪಿ ನಗರದ ಕುಂಜಿಬೆಟ್ಟುವಿನಲ್ಲಿ ನಡೆದ ಗ್ಯಾಂಗ್​ ವಾರ್​ ಜನರು ಮಾಸುವ ಮುನ್ನೆವೇ ಮತ್ತೊಂದು ಗ್ಯಾಂಗ್​ ವಾರ್​ ನಡೆದಿದೆ. ಉಡುಪಿಯ ಪುತ್ತೂರಿ‌ನ ಬಿರಿಯಾನಿ ಪಾಯಿಂಟ್‌ ಬಳಿ ಜೂನ್​ 15 ರಂದು ಗ್ಯಾಂಗ್​ ವಾರ್ ನಡೆದಿದ್ದು, ಜನರು ಭಯಭೀತರಾಗಿದ್ದಾರೆ.​
 ಉಡುಪಿಯಲ್ಲಿ ಮತ್ತೊಂದು ಗ್ಯಾಂಗ್ ವಾರ್  ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜೂನ್ 15ರ ರಾತ್ರಿ ಘಟನೆ ನಡೆದಿದೆ. ಪುತ್ತೂರಿನ ಸೆಲೂನ್ ನೌಕರ ಚರಣ್, ಶಬರಿ ಎಂಬಾತನಿಗೆ ಬೈದಿದ್ದನು. ಈ ವಿಚಾರ ತಿಳಿದ ಪ್ರವೀಣ್ ಮತ್ತು ಈತನ ಗ್ಯಾಂಗ್ ಮಾತುಕತೆಗೆಂದು ಚರಣ್​ನನ್ನು ಉಡುಪಿ ನಗರದ ಪುತ್ತೂರಿ‌ನ ಬಿರಿಯಾನಿ ಪಾಯಿಂಟ್‌ ಬಳಿ ಕರೆದಿದ್ದರು.

ಚರಣ್ ತನ್ನ ಮೂವರು ಸ್ನೇಹಿತರ ಜೊತೆಗೂಡಿ ಆಗಮಿಸಿದ್ದನು. ಪ್ರವೀಣ್ ಆ್ಯಂಡ್​ ಟೀಂ ಇವರ ಮೇಲೆ ತಲವಾರು ಬೀಸಿದೆ. ದಾಳಿಯಿಂದ ತಪ್ಪಿಸಿಕೊಳ್ಳಲು ಚರಣ್ ಮತ್ತು ಸಂಗಡಿಗರು ಬೈಕ್, ಸ್ಕೂಟರ್ ಬಿಟ್ಟು ಓಡಿದ್ದಾರೆ. ಚರಣ್ ಸಿಗದಿದ್ದಕ್ಕೆ ಪ್ರವೀಣ್​​ ಮತ್ತು ಆತನ ಟೀಂ ಆತನ ಬೈಕ್ ಮೇಲೆ ತಲವಾರಿನಿಂದ ಹಾನಿ ಮಾಡಿದ್ದಾರೆ. 

ಪುಂಡರು ತಾವು ಕೃತ್ಯವೆಸಗಿರುವ ದೃಶ್ಯವನ್ನು ವೀಡಿಯೋ ಮಾಡಿ ಅಟ್ಟಹಾಸ ಮೆರೆದಿದ್ದಾರೆ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಒಂದೇ ತಿಂಗಳು ಅಂತರದಲ್ಲಿ ಮೂರು ಗ್ಯಾಂಗ್ ವಾರ್ ಪ್ರಕರಣ ನಡೆದಿದ್ದು  ಹೆಚ್ಚುತ್ತಿರುವ ಗ್ಯಾಂಗ್ ವಾರ್​ನಿಂದ ಉಡುಪಿ ನಗರದ ಜನತೆ ಭಯ ಭೀತರಾಗಿದ್ದಾರೆ.
 
 
 
 
 
 
 
 
 
 
 

Leave a Reply