ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಇಳಿಕೆ

ನವದೆಹಲಿ: ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್ ಪಿ ಜಿ ಸಿಲಿಂಡರ್ ಗಳ ಬೆಲೆಯನ್ನು ಪರಿಷ್ಕರಿಸಿದ್ದು, ಇದೀಗ ಸಿಲಿಂಡರ್ ಗಳ ಬೆಲೆ 171.50 ಕಡಿತಗೊಂಡಿದೆ. ಈ ಆದೇಶವು ಇಂದಿನಿಂದಲೇ ಜಾರಿಗೆ ಬರಲಿದೆ.  ಏಪ್ರಿಲ್ ನಲ್ಲಿ ಸರ್ಕಾರ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು 92 ರೂ ಇಳಿಕೆ ಮಾಡಿತ್ತು.

ಇದೀಗ ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಗಳ ಬೆಲೆ ಪುನಃ ಇಳಿಕೆ ಮಾಡಲಾಗಿದೆ. ಆದರೆ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಗಳ ಧರ ಮೊದಲಿನಂತೆ ಇದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್ ಪಿ ಜಿ ಸಿಲಿಂಡರ್ ಗಳ ಬೆಲೆ ಮೊದಲು 2028 ರೂ ಇತ್ತು ಇದೀಗ ಬೆಲೆ 1856.50 ರೂ. ಆಗಿದೆ. ಹಾಗೂ ಮುಂಬೈನಲ್ಲಿ 1980 ಇದ್ದ ಎಲ್ ಪಿ ಜಿ ಧರ 1808.50 ರೂ ಆಗಿದೆ. ಚೆನ್ನೈನಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ ಈ ಮೊದಲು 2192.50 ರೂ ಇದ್ದು ಇದೀಗ 2021.50 ರೂ ಆಗಿದೆ.

 
 
 
 
 
 
 
 
 
 
 

Leave a Reply