ಗಿಲ್ಬರ್ಟ್ ಡಿ’ಸಿಲ್ವ ನಿಧನ

ಉಡುಪಿ : ಬ್ರಹ್ಮಾವರ ಅಂತೋನಿ ಪ್ರೆಸ್ ಮಾಲೀಕರಾದ ಗಿಲ್ಬರ್ಟ್ ಡಿ’ಸಿಲ್ವ (76) 05-12-2022 ಸೋಮವಾರ ನಿಧನರಾದರು. ಹಿರಿಯ ಸಾಮಾಜಿಕ ಕಾರ್ಯಕರ್ತರಾದ ಇವರು ಕಲೆ-ಸಾಹಿತ್ಯ ಮತ್ತು ಸಮಾಜದ ಬಗ್ಗೆ ಅತೀವ ಆಸಕ್ತಿ ಹೊಂದಿದ್ದರು.ಹೋಲಿ ಫ್ಯಾಮಿಲಿ ಚರ್ಚ್ ಪಾಲನಾ ಮಂಡಳಿಯ ಸದಸ್ಯರಾಗಿ, ಅಜಪುರ ಕರ್ನಾಟಕ ಸಂಘದ ಅಧ್ಯಕ್ಷರಾಗಿ, ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಯಕ್ಷಗಾನ ಕಲಾರಂಗದ ಸದಸ್ಯರಾಗಿದ್ದ ಇವರ ನಿಧನಕ್ಕೆ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ಸೂಚಿಸಿದ್ದಾರೆ.

 
 
 
 
 
 
 
 
 
 
 

Leave a Reply