ಹೈನುಗಾರಿಕೆ ತಾಣ, ಗೋಶಾಲೆಗಳ ನೊಂದಣಿಗೆ ಸೂಚನೆ

ಉಡುಪಿ​: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿರುವ ಹೈನುಗಾರಿಕೆ ತಾಣಗಳು​ ಹಾಗೂ ಗೋಶಾಲೆಗಳ ಬಗ್ಗೆ ಮಾಹಿತಿ ಯನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಜಿಲ್ಲೆಯ ಮಾಲಿನ್ಯ ನಿಯಂತ್ರಣ​ ಮಂಡಳಿಗೆ ಸಲ್ಲಿಸಬೇಕು.

ನಗರಸಭಾ ವ್ಯಾಪ್ತಿಯಲ್ಲಿರುವ ಎಲ್ಲಾ ಹೈನುಗಾರಿಕೆ ತಾಣಗಳು ಹಾಗೂ ಗೋಶಾಲೆಗಳು ನಗರ ಸ್ಥಳೀಯ​ ​ಸಂಸ್ಥೆಗಳಲ್ಲಿ ಆನ್‌ಲೈನ್ ಮೂಲಕ ನೊಂದಣಿ ಮಾಡಿಕೊಳ್ಳಬೇಕು ಅಥವಾ ಆನ್‌ಲೈನ್ ನೊಂದಣಿ​ ಮಾಡಿಕೊಳ್ಳುವವರೆಗೆ ಆಫ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಳ್ಳಬೇಕು.​​

10 ಕ್ಕಿಂತ ಹೆಚ್ಚು ಪ್ರಾಣಿಗಳನ್ನು ಹೊಂದಿರುವ ಡೈರಿ ಫಾರ್ಮ್ಗಳು ಹಾಗೂ ಗೋಶಾಲೆಗಳನ್ನು ಸ್ಥಾಪಿಸಲು ಹಾಗೂಕಾರ್ಯ ನಿರ್ವಹಿಸಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ​ಯಿಂದ  ಜಲ ಹಾಗೂ ವಾಯು ಮಾಲಿನ್ಯತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾಯ್ದೆ ಅಡಿಯಲ್ಲಿ ಒಪ್ಪಿಗೆಯನ್ನು ಪಡೆಯಬೇಕು.​ 

ಎಲ್ಲಾ ಡೈರಿ ಫಾರ್ಮ್ಗಳು ಹಾಗೂ ಗೋಶಾಲೆಗಳು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾರ್ಗಸೂಚಿಗಳಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವುದನ್ನು ನಗರ ಸ್ಥಳೀಯ ಸಂಸ್ಥೆಗಳು ಅಥವಾ ಮಾಲಿನ್ಯ ನಿಯಂತ್ರಣ ಮಂಡಳಿಯುಖಚಿತಪಡಿಸಿಕೊಳ್ಳಬೇಕು.


ಹೈನುಗಾರಿಕೆ ತಾಣಗಳನ್ನು ಹಾಗೂ ಗೋಶಾಲೆಗಳನ್ನು ನಿರ್ವಹಿಸುತ್ತಿರುವವರು ಒಂದು ವಾರದಲ್ಲಿ ನೊಂದಣಿಮಾಡಿಕೊಳ್ಳುವಂತೆ ನಗರಸಭೆ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.
 
 
 
 
 
 
 
 
 
 
 

Leave a Reply