Janardhan Kodavoor/ Team KaravaliXpress
27.6 C
Udupi
Saturday, July 2, 2022
Sathyanatha Stores Brahmavara

ಇಂಡಿಯನ್ ಜರ್ನಲಿಸ್ಟ್ ಕಾಂಪೆಡಿಯಂ ದೆಹಲಿ ವತಿಯಿಂದ ಜನಸೇವಾ ಸದ್ಭಾವನ ಪುರಸ್ಕಾರ್ ಪ್ರಶಸ್ತಿಗೆ ದಿವಾಕರ ಬಿ ಶೆಟ್ಟಿ ಕಳತ್ತೂರು ಆಯ್ಕೆ

ಇಂಡಿಯನ್ ಜರ್ನಲಿಸ್ಟ್ ಕಾಂಪೆಡಿಯಂ ದೆಹಲಿ ವತಿಯಿಂದ ಏಪ್ರಿಲ್ 20 ರಂದು ಗೋವಾದ ಪಂಚತಾರ ಹೋಟೆಲ್ ವಿವಿಟಾ ತಾಜ್ ಸಭಾಂಗಣದಲ್ಲಿ ನಡೆಯುವ ಐ. ಜೆ.ಸಿ ಹಾಗೂ ಇ.ಜೆ.ಎಸ್.ಐ ರಾಷ್ಟೀಯ ಸಮ್ಮೇಳನದಲ್ಲಿ ರಾಷ್ಟೀಯ ಮಟ್ಟದಲ್ಲಿ ಸಮಾಜ ಸೇವಕರಿಗೆ ಕೊಡಮಾಡುವ ಜನಸೇವಾ ಸದ್ಭಾವನ ಪುರಸ್ಕಾರ್ ರಾಷ್ಟೀಯ ಪ್ರಶಸ್ತಿಯನ್ನು ಜನಸಂಪರ್ಕ ಜನಸೇವಾ ವೇದಿಕೆ ಕಾಪು ಅಧ್ಯಕ್ಷರಾದ ದಿವಾಕರ ಬಿ ಶೆಟ್ಟಿ ಕಳತ್ತೂರು ಆಯ್ಕೆಯಾಗಿದ್ದಾರೆ ಎಂದು ಇಂಡಿಯನ್ ಜರ್ನಲಿಸ್ಟ್ ಕಾಂಪೆಡಿಯಂ ಸಂಸ್ಥೆ ಇದರ ಅಧ್ಯಕ್ಷರಾದ ಗ್ಯಾನ್ ಪ್ರಕಾಶ್ ದೆಹಲಿ ಇವರು ಪತ್ರಿಕಾ ಮೂಲಕ ತಿಳಿಸಿದ್ದಾರೆ ಹಾಗೂ ಈ ಸಮಾರಂಭದಲ್ಲಿ ಗೋವಾದ ಸಚಿವರು ಕೇಂದ್ರ ಸಚಿವರು ಹಾಗೂ ಅನೇಕ ಗಣ್ಯಾತಿ ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆಂದು ಅವರು ತಿಳಿಸಿದ್ದಾರೆ
ದಿವಾಕರ ಬಿ ಶೆಟ್ಟಿ ಕಳತ್ತೂರು ಇವರು ಕಳೆದ 30 ವರ್ಷಗಳಿಂದ ಕಾಪು ಕಳತ್ತೂರು ಪರಿಸರದಲ್ಲಿ 1000 ಕ್ಕೂ ಮಿಕ್ಕಿ ಸರಕಾರಿ ಸೌಲಭ್ಯ ಜನರಿಗೆ ತಲುಪುವ ಹಾಗೆ ವ್ಯವಸ್ಥೆ ಮಾಡಿದ್ದಾರೆ ಅದಲ್ಲದೆ ನೂರಾರು ವಿದ್ಯಾರ್ಥಿಗಳಿಗೆ ವಿವಿಧ ಸಂಸ್ಥೆಗಳಿಂದ ವಿದ್ಯಾರ್ಥಿ ವೇತನ,ವಿದ್ಯಾಬ್ಯಾಸಕ್ಕೆ ಸಹಾಯ ಮಾಡಿದ್ದಾರೆ ವಿವಿಧ ಸಂಘಟನೆಯಿಂದ ಬಡ ಜನರಿಗೆ ಮನೆ ಕಟ್ಟುವಲ್ಲಿ ಸಹಾಯ ಮಾಡಿರುತ್ತಾರೆ ಬಡವರ ಕಷ್ಟ ದಲ್ಲಿ ಸದಾ ಬಾಗಿಯಾಗುತ್ತಾರೆ
ಹವ್ಯಾಸಿ ಪತ್ರಕರ್ತರಾಗಿದ್ದು ಕಾಪು ದ್ವಾದಶಿ ಪಬ್ಲಿಸಿಟಿ ನ್ಯೂಸ್ ಸರ್ವಿಸ್ ಇದರ ಆಡಳಿತ ನಿರ್ದೇಶಕರಾಗಿದ್ದು ಗ್ರಾಮೀಣ ಮಟ್ಟದ ಅಂಚೆ ಇಲಾಖೆಯಲ್ಲಿ ಪೋಸ್ಟ್ ಮಾಸ್ಟರ್ ಆಗಿ ಸೇವೆ ನಿರ್ವಹಿಸುತ್ತಿದ್ದಾರೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!