ಉಡುಪಿ ಜಿಲ್ಲಾ ಸಾರ್ವಜನಿಕ ಗ್ರಂಥಾಲಯಕ್ಕೆ ನಾಮಕರಣ

 

ಉಡುಪಿ ಜಿಲ್ಲಾ ಸಾರ್ವಜನಿಕ ಗ್ರಂಥಾಲಯಕ್ಕೆ “ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯ ಕೇಂದ್ರ ಗ್ರಂಥಾಲಯ” ಎಂದು ನಾಮಕರಣ ಮಾಡಿ ಸರ್ಕಾರ ಆದೇಶಸ ಹೊರಡಿಸಿದೆ.​ ಸಾರಸ್ವ​​ತ ಕ್ಷೇತ್ರದಲ್ಲಿ ಉಡುಪಿಯ ಕೀರ್ತಿಯನ್ನು ವಿಶ್ವದಾದ್ಯಂತ ಪಸರಿಸಿದ ಈ ನಾಡು ಕಂಡ ಶ್ರೇಷ್ಠ ವಿದ್ವಾಂಸ, ಪದ್ಮಶ್ರೀ ಪುರಸ್ಕೃತ ಸಾಹಿತಿ, ಕವಿ, ಪ್ರವಚನಕಾರ ಡಾ. ಬನ್ನಂಜೆ ಗೋವಿಂದಾಚಾರ್ಯರು. 

ಈ ದೇಶದ ಪ್ರಮುಖ ವಿದ್ವಾಂಸರಲ್ಲಿ ಒಬ್ಬರಾಗಿದ್ದ ಅವರ ವೇದ, ಪುರಾಣಗಳ ಕುರಿತ ಕೃತಿಗಳು, ಪ್ರವಚನಗಳು ಧಾರ್ಮಿಕ ಪ್ರಜ್ಞೆಯನ್ನು ಜಾಗೃತ​ ​ಗೊಳಿಸುವಂತಿದ್ದವು. ಪ್ರವಚನಗಳ ಮೂಲಕ ತತ್ವ ಪ್ರಚಾರ ಕೈಗೊಂಡ ಅವರು ಮಾಧವ ತತ್ವದಲ್ಲಿ ಅಮೋಘ ಪಾ೦ಡಿತ್ಯ ಸಾಧಿಸಿದ್ದರು. ಕನ್ನಡ, ತುಳು, ಸಂಸ್ಕೃತ ಭಾಷೆಗಳಲ್ಲಿ ಪಾರಂಗತರಾಗಿದ್ದು, ಪ್ರವಚನಕಾರರಾಗಿ ದೇಶ ವಿದೇಶಗಳಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದರು. 
 
ಸಾರಸ್ವತ ಕ್ಷೇತ್ರದಲ್ಲಿ ವಿಶ್ವದೆಲ್ಲೆಡೆ ಉಡುಪಿ ಕೀರ್ತಿಯನ್ನು ಬೆಳಗಿದ ಬಹುಶ್ರುತ ವಿದ್ವಾಂಸ , ಪದ್ಮಶ್ರೀ ಪುರಸ್ಕೃತ ವಿದ್ಯಾವಾಚಸ್ಪತಿ ಡಾ. ಬನ್ನಂಜೆ ಗೋವಿದಾಚಾರ್ಯರ ಹೆಸರನ್ನು ಉಡುಪಿ ಜಿಲ್ಲಾ ಸಾರ್ವಜನಿಕ ಗ್ರಂಥಾಲಯಕ್ಕೆ ನಾಮಕರಣ ಮಾಡಿ ಗೌರವಿಸಲಾಯಿತು.​​
 
 
 
 
 
 
 
 
 

Leave a Reply