ಅ.29 – ‘ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ’ ಮತ್ತು ‘ಸ್ವಯಂ ಪ್ರೇರಿತ ರಕ್ತದಾನ ಶಿಬಿರ’

ಬಿಲ್ಲವ ಸೇವಾ ಸಂಘ(ರಿ.) ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ಆಶ್ರಯದಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇದರ ಸಹಯೋಗದೊಂದಿಗೆ ಲಯನ್ಸ್ ಕ್ಲಬ್ ಹಿರಿಯಡ್ಕ, ದಿಶಾ ಸರ್ಜಿಕಲ್ಸ್ & ಲೈಫ್ ಕೇರ್ ಉಡುಪಿ, ಹೆಚ್.ಡಿ.ಎಫ್.ಸಿ ಬ್ಯಾಂಕ್ ಮಂಗಳೂರು, ಬುಡೋಕಾನ್ ಕರಾಟೆ & ಸ್ಪೋರ್ಟ್ಸ್ ಅಸೋಸಿಯೇಶನ್ ಕರ್ನಾಟಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಅಂಬಲಪಾಡಿ ವಲಯ, ಉಜ್ವಲ ಸಂಜೀವಿನಿ ಒಕ್ಕೂಟ ಅಂಬಲಪಾಡಿ ಗ್ರಾ.ಪಂ. ವ್ಯಾಪ್ತಿ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪಂದುಬೆಟ್ಟು, ಸ್ವಾಮಿ ಫ್ರೆಂಡ್ಸ್ ಆಚಾರಿಗುಂಡಿ-ಅಂಬಲಪಾಡಿ, ಎನ್.ಸಿ. ಯೂತ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್(ರಿ.) ಬಂಕೇರ್ಕಟ್ಟ-ಅಂಬಲಪಾಡಿ ಮತ್ತು ಚಾಂಪಿಯನ್ ಕ್ರಿಕೆಟರ್ಸ್ ಅಂಬಲಪಾಡಿ ಇದರ ಸಹಭಾಗಿತ್ವದೊಂದಿಗೆ ಬಿಲ್ಲವ ಮಹಿಳಾ ಘಟಕ ಅಂಬಲಪಾಡಿ ಮತ್ತು ಶ್ರೀ ಗುರು ಮಹಿಳಾ ಕುಣಿತ ಭಜನಾ ಮಂಡಳಿ ಅಂಬಲಪಾಡಿ ಇದರ ಸಹಕಾರದೊಂದಿಗೆ ‘ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ’ ಮತ್ತು ‘ಸ್ವಯಂ ಪ್ರೇರಿತ ರಕ್ತದಾನ ಶಿಬಿರ’ವು ತಾ.29.10.2023ನೇ ರವಿವಾರ ಬೆಳಿಗ್ಗೆ ಗಂಟೆ 9.00 ರಿಂದ ಮಧ್ಯಾಹ್ನ ಗಂಟೆ 1.00ರ ವರೆಗೆ ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ ತಿಳಿಸಿದ್ದಾರೆ.

ಬೆಳಿಗ್ಗೆ ಗಂಟೆ 9.30ಕ್ಕೆ ಅಂಬಲಪಾಡಿ ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ರವರು ಶಿಬಿರವನ್ನು ಉದ್ಘಾಟಿಸಲಿದ್ದಾರೆ.

ಸಂಘದ ಗೌರವಾಧ್ಯಕ್ಷ ಹಾಗೂ ಮಲ್ಪೆ ಬಿಲ್ಲವರ ಸೇವಾ ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ, ದಿಶಾ ಸರ್ಜಿಕಲ್ಸ್ & ಲೈಫ್ ಕೇರ್ ಇದರ ಆಡಳಿತ ಪಾಲುದಾರ ಪಠೇಲರ ಮನೆ ಭರತ್ ಶೆಟ್ಟಿ ಅಂಬಲಪಾಡಿ, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇದರ ವೈದ್ಯಕೀಯ ತಂಡದ ಮುಖ್ಯಸ್ಥರು ಹಾಗೂ ಶಿಬಿರದ ಸಂಘಟಕ ಸಂಘ-ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ರಕ್ತದಾನಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply