ಹಿರಿಯ ನಾಗರಿಕರಿಗೆ ಸಾಧನ ಸಲಕರಣೆಗಳ ವಿತರಣಾ ಸಮಾರಂಭ

ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ, ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ  ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ  ನಡೆದ ರಾಷ್ಟೀಯ ವಯೋಶ್ರೀ ಯೋಜನೆಯಡಿ ಹಿರಿಯ ನಾಗರಿಕರಿಗೆ ಸಾಧನ ಸಲಕರಣೆಗಳ  ವಿತರಣಾ ಸಮಾರಂಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಭಾಗವಹಿಸಿದ್ದರು. 
 
ಈ ವೇಳೆ ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ , ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಬೈಂದೂರು ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಜಿ.ಪಂ. ಸಿಇಒ ಪ್ರಸನ್ನ ಹೆಚ್, ಅಪರ ಜಿಲ್ಲಾಧಿಕಾರಿ ಮಮತಾ ದೇವಿ, ಉಪವಿಭಾಗಧಿಕಾರಿ ರಶ್ಮಿ ಮತ್ತಿತರರು ಇದ್ದರು.
 
 
 
 
 
 
 
 
 
 
 

Leave a Reply