ಬ್ರೇಕಿಂಗ್ ನ್ಯೂಸ್: ನಾಳೆಯೇ ಹಿಜಾಬ್ ಪ್ರಕರಣದ ತೀರ್ಪು ಪ್ರಕಟ.

ಹೈಕೋರ್ಟ್ ಪೂರ್ಣಪೀಠದಿಂದ ಬೆಳಗ್ಗೆ 10.30 ಕ್ಕೆ ತೀರ್ಪು.

ಬೆಂಗಳೂರು: ನಾಳೆ ಬೆಳಗ್ಗೆ 10.30 ಕ್ಕೆ ಹೈಕೋರ್ಟ್ ನಿಂದ ಹಿಜಾಬ್ ಪ್ರಕರಣದ ತೀರ್ಪು ಪ್ರಕಟಿಸಲಾಗುತ್ತದೆ. ಸಮವಸ್ತ್ರದ ಜತೆಗೆ ಹಿಜಾಬ್ ಗೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಪೂರ್ಣಗೊಳಿಸಿದೆ.​ ಹೈಕೋರ್ಟ್ ಪೂರ್ಣ ಪೀಠದಿಂದ ನಾಳೆ ಬೆಳಿಗ್ಗೆ ತೀರ್ಪು ಪ್ರಕಟಿಸಲಾಗುತ್ತದೆ.

ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ, ನ್ಯಾಯಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್ ಮತ್ತು ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಅವರ ಪೂರ್ಣ ಪೀಠದಿಂದ ಪ್ರಕರಣದ ತೀರ್ಪು ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.

Leave a Reply