ಹಿಜಾಬ್ ವಿವಾದ :ಸರ್ಕಾರದ ಆದೇಶ ಕಾನೂನು ಬದ್ಧ~ ಹೈಕೋರ್ಟ್

ಬೆಂಗಳೂರು: ಪ್ರತಿಭಟನೆಗಳು, ಆರೋಪ, ಪ್ರತ್ಯಾರೋಪಗಳು ಮತ್ತು ಒಂದರ ಹಿಂದೊಂದು ವಿಚಾರಣೆಗಳ ನಂತರ, ಕರ್ನಾಟಕ ಹೈಕೋರ್ಟ್ ಇಂದು ಹಿಜಾಬ್ ಪ್ರಕರಣದ ತೀರ್ಪು ಪ್ರಕಟಿಸಿದೆ.

ಹಿಜಾಬ್ ಧರಿಸಿವುದು ಇಸ್ಲಾಂ ನ ಅತ್ಯಗತ್ಯ ಭಾಗವಲ್ಲ. ಸಮವಸ್ತ್ರ ಸಂಹಿತೆ ಕುರಿತಾಗಿ ಸರ್ಕಾರದ ಆದೇಶ ಕಾನೂನು ಬದ್ಧವಾಗಿದೆ ಎಂದು ಹೈಕೋರ್ಟ್ ತೀರ್ಪು ನೀಡಿದೆ.

ಉಡುಪಿಯ ಕಾಲೇಜಿನಲ್ಲಿ ಆರಂಭವಾದ ಹಿಜಾಬ್- ಕೇಸರಿ ಶಾಲು ವಿವಾದ ನಂತರ ರಾಜ್ಯದ ಹಲವು ಜಿಲ್ಲೆಗಳಿಗೆ ಹಬ್ಬಿತ್ತು. ಹಲವೆಡೆ ಪ್ರತಿಭಟನೆಗಳು ನಡೆದಿದ್ದವು.

ನಂತರ ಸರ್ಕಾರ ಶಿಕ್ಷಣ ಸಂಸ್ಥೆಗಳಿಗೆ ವಸ್ತ್ರಸಂಹಿತೆ ಜಾರಿ ಮಾಡಿತ್ತು. ಇದನ್ನು ಪ್ರಶ್ನಿಸಿ ವಿದ್ಯಾರ್ಥಿನಿಯರು ಕೋರ್ಟ್ ಮೆಟ್ಟಿಲೇರಿದ್ದರು.

 
 
 
 
 
 
 
 
 
 
 

Leave a Reply