ಹಿಜಾಬ್ ತೀರ್ಪಿಗೆ ಅಸಮಾಧಾನ, ನಾಳೆ ಮುಸ್ಲಿಂಮ್ ರಿಂದ ಕರ್ನಾಟಕ ಬಂದ್.

ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ಕುರಿತಂತೆ ರಾಜ್ಯ ಸರ್ಕಾರದ ನಿಷೇಧದ ಕ್ರಮವನ್ನು ಎತ್ತಿಹಿಡಿದ ಹೈಕೊರ್ಟ್ ತೀರ್ಪಿಗೆ ಮುಸ್ಲಿಂ ಸಮುದಾಯ ಅಸಮಾಧಾನ ವ್ಯಕ್ತಪಡಿಸಿದೆ.

ಈಗಾಗಲೇ ಕೆಲವರು ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಮೇಲ್ಮನವಿಯ ಅರ್ಜಿಯ ವಿಚಾರಣೆಗೆ ಆತುರವೇನಿಲ್ಲ ಎಂದ ಸುಪ್ರೀಂ ಕೋರ್ಟ್ ಹೋಳಿ ಹಬ್ಬದ ನಂತರ ವಿಚಾರಣೆ ನಡೆಸುವುದಾಗಿ ಹೇಳಿದೆ.

ಮತ್ತೊಂದೆಡೆ ಹೈಕೋರ್ಟ್ ತೀರ್ಪಿಗೆ ಅಸಮಾಧಾನ ವ್ಯಕ್ತಪಡಿಸಿರುವ ರಾಜ್ಯದ ಮುಸ್ಲಿಂ ಮುಖಂಡರು ನಾಳೆ ತಮ್ಮ ಸಮುದಾಯ ಯಾವುದೇ ವಹಿವಾಟು ನಡೆಸದೆ ಬಂದ್ ನಡೆಸುವುದಾಗಿ ಹೇಳಿದೆ.

ಅಮಿರ್ ಎ ಷರಿಯಾತ್ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಸಲಿಂ ಅಹ್ಮದ್, ಜಮೀರ್ ಅಹ್ಮದ್ ಖಾನ್, ಯು.ಟಿ.ಖಾದರ್, ಎನ್.ಎ.ಹ್ಯಾರಿಸ್, ನಜೀರ್ ಅಹ್ಮದ್, ರೆಹಮಾನ್ ಖಾನ್, ಖನೀಜ್ ಫಾತಿಮಾ ಮುಂತಾದ ಮುಸ್ಲಿಂ ಮುಖಂಡರು ಭಾಗಿಯಾಗಿದ್ದು ಈ ನಿರ್ಧಾರಕ್ಕೆ ಬರಲಾಗಿದೆ.

ತೀರ್ಪಿನ ಬೆನ್ನಲ್ಲೇ ಸುದ್ದಿಗೋಷ್ಟಿ ನಡೆಸಿದ ಮುಸ್ಲಿಂ ವಿದ್ಯಾರ್ಥಿನಿಯರ ನಡೆಗೆ ಮುಸ್ಲಿಂ ಧರ್ಮಗುರುಗಳಿಂದ ಆಕ್ಷೇಪ ವ್ಯಕ್ತವಾಗಿದೆ.

ಸುಪ್ರೀಂ ಕೋರ್ಟ್ ಗೆ ಹೋಗಲೂ ನಮಗೆ ಅವಕಾಶವಿದ್ದು, ನಮ್ಮ ಪರ ವಾದಿಸಲು ಕಾಂಗ್ರೆಸ್ ಮುಖಂಡ ಹಾಗೂ ವಕೀಲ ಕಪಿಲ್ ಸಿಬಲ್ ಅವರನ್ನು ಸಂಪರ್ಕಿಸಿರುವುದಾಗಿ ಮುಸ್ಲಿಂ ಧರ್ಮಗುರುಗಳು ಹೇಳಿದ್ದಾರೆ.

 
 
 
 
 
 
 
 
 
 
 

Leave a Reply