ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ಮೂರು ದಿನಗಳವರೆಗೆ ರಜೆ

ಬೆಂಗಳೂರು: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಯಲ್ಲಿ ಬುಧವಾರದಿಂದ ಮೂರು ದಿನಗಳವರೆಗೆ ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ‌.

ಸಿಎಂ ಬಸವರಾಜ್ ಬೊಮ್ಮಾಯಿ ಈ ಆದೇಶ ನೀಡಿದ್ದಾರೆ. ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

8ನೇ ತರಗತಿಯಿಂದ ಪದವಿಯವರೆಗೆ ಮೂರು ದಿನ ರಜೆ ನೀಡಲಾಗಿದೆ.

ವಿದ್ಯಾರ್ಥಿಗಳು ಶಾಂತಿ – ಸುವ್ಯವಸ್ಥೆ ಕಾಪಾಡಬೇಕು ಎಂದು ಮನವಿ ಮಾಡಿದ್ದಾರೆ.

 
 
 
 
 
 
 
 
 
 
 

Leave a Reply