ಉಡುಪಿ ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಹಿಜಾಬ್‌ ಗದ್ದಲ

ಉಡುಪಿ: ರಾಜ್ಯದಲ್ಲಿ ಹಿಜಾಬ್-ಕೇಸರಿ ಶಾಲು ವಿವಾದದ ಮಧ್ಯೆ ಇಂದಿನಿಂದ ಕಾಲೇಜುಗಳು ರೀ ಓಪನ್ ಆಗಿದ್ದು ಉಡುಪಿ ಜಿಲ್ಲೆಯಲ್ಲಿ ಕೂಡ ಕಾಲೇಜುಗಳು ಪುನರಾರಂಭವಾಗಿದ್ದು , ಅಜ್ಜರಕಾಡಿನ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್‌ ಗದ್ದಲ ಏರ್ಪಟ್ಟಿದೆ.

ಸುಮಾರು 30 ಕ್ಕೂ ಅಧಿಕ ವಿದ್ಯಾರ್ಥಿಗಳು ಕಾಲೇಜಿಗೆ ಹಿಜಾಬ್‌ ಧರಿಸಿಕೊಂಡು ಬಂದಿದ್ದು, ಕಾಲೇಜಿನಲ್ಲಿ ಸಮವಸ್ತ್ರ ಸಂಹಿತೆ ಇದ್ದು ನ್ಯಾಯಾಲಯದ ಮಧ್ಯಂತರ ಆದೇಶವನ್ನು ಪಾಲಿಸುವಂತೆ ಕಾಲೇಜು ಪ್ರಾಂಶುಪಾಲರು ವಿದ್ಯಾರ್ಥಿನಿಯರಿಗೆ ಮನವರಿಕೆ ಮಾಡಿದರು. ವಿದ್ಯಾರ್ಥಿನಿಯರೊಂದಿಗೆ ಸಭೆ ನಡೆಸಿದ ಪ್ರಾಂಶುಪಾಲರು ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ ನಾವು ನ್ಯಾಯಾಲಯದ ಮಧ್ಯಂತರ ಆದೇಶವನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದ್ದೇವೆ. ಅದರಂತೆ ಕೆಲವು ವಿದ್ಯಾರ್ಥಿನಿಯರು ಹಿಜಾಬ್‌ ತೆಗೆದು ತರಗತಿಗೆ ಹಾಜರಾಗಿದ್ದಾರೆ, ಬೆರಳೆಣಿಕೆಯ ವಿದ್ಯಾರ್ಥಿನಿಯರು ಹಿಜಾಬ್‌ ತೆಗೆಯಲು ನಿರಾಕರಿಸಿದ್ದು ಕೆಲವು ವಿದ್ಯಾರ್ಥಿನಿಯರು ಪ್ರತ್ಯೇಕ ಕೊಠಡಿಯಲ್ಲಿ ಕೂರುವುದಾಗಿ ಹೇಳೀದ್ದು ಅವರಿಗೆ ಆನ್ಲೈನ್‌ ಕ್ಲಾಸ್‌ ಮಾಡಲು ಚಿಂತನೆ ನಡೆಸಲಾಗಿದೆ. ವಿದ್ಯಾರ್ಥಿಗಳ ಪರೀಕ್ಷೆಗೆ ತೊಡಕು ಉಂಟಾಗದಂತೆ ಕಾಲೇಜು ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದರು.

 
 
 
 
 
 
 
 
 
 
 

Leave a Reply