ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆ ಹೊಳಪು – 2021ಕ್ಕೆ ಚಾಲನೆ

ಉಡುಪಿ: ಡಾ. ಶಿವರಾಮ ಕಾರಂತ ಜನ್ಮದಿನೋತ್ಸವ ಅಂಗವಾಗಿ ಕೋಟತಟ್ಟು ಗ್ರಾಮ ಪಂಚಾಯತ್ ಹಾಗೂ ಡಾ. ಶಿವರಾಮ ಕಾರಂತ ಪ್ರತಿಷ್ಠಾನ ಕೋಟ ಆಶ್ರಯದಲ್ಲಿ ಕೋಟ ವಿವೇಕ ವಿದ್ಯಾಸಂಸ್ಥೆ ಆವರಣದಲ್ಲಿ ನಡೆದ ಉಡುಪಿ ಮತ್ತು ದ. ಕ. ಜಿಲ್ಲೆಗಳ ಪಂಚಾಯತ್ ರಾಜ್ ಮತ್ತು ನಗರ ಸ್ಥಳೀಯಾಡಳಿತ ಪ್ರತಿನಿಧಿಗಳ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆ ಹೊಳಪು – 2021ಕ್ಕೆ ಶನಿವಾರ ಚಾಲನೆ ನೀಡಲಾಯಿತು.

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು,ಪಥಸಂಚಲನದಲ್ಲಿ ಉಡುಪಿ ಮತ್ತು ದ. ಕ. ಜಿಲ್ಲೆಗಳ ಪಂಚಾಯತ್ ರಾಜ್ ಮತ್ತು ನಗರ ಸ್ಥಳೀಯಾಡಳಿತ ಪ್ರತಿನಿಧಿಗಳ ಗೌರವ ರಕ್ಷೆ ಸ್ವೀಕರಿಸಿದರು.

ಕ್ರೀಡಾಕೂಟದ ಧ್ವಜಾರೋಹಣವನ್ನು ಉಡುಪಿ ಶಾಸಕ ರಘುಪತಿ ಭಟ್ ನೆರವೇರಿಸಿದರು. ವಿಧಾನ ಪರಿಷತ್ ಸದಸ್ಯ ಅಪ್ಪಾಜಿ ಗೌಡ ಪ್ರತಿಜ್ಞಾವಿಧಿ ಬೋಧಿಸಿದರು. ಶಾಸಕ ಯು. ಟಿ. ಖಾದರ್ ಕ್ರೀಡಾಜ್ಯೋತಿ ಪಡೆದುಕೊಂಡರು. ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಬಲೂನು ಹಾರಿಸುವ ಮೂಲಕ ಕ್ರೀಡೆಗಳಿಗೆ ಚಾಲನೆ ನೀಡಿದರು.

 

ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರಕುಮಾರ್ ಪಥ ಸಂಚಲನಕ್ಕೆ ಚಾಲನೆ ನೀಡಿದರು. ಗೌರಿಗದ್ದೆ ವಿನಯ ಗುರೂಜಿ ಕಾರ್ಯಕ್ರಮ ಉದ್ಘಾಟಿಸಿದರು. ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಆನಂದ ಸಿ. ಕುಂದರ್ ಸ್ವಾಗತಿಸಿದರು. ಶಿಕ್ಷಕ ನರೇಂದ್ರ ಕುಮಾರ್ ಕೋಟ ನಿರೂಪಿಸಿದರು.

 

ಉಡುಪಿ ಮತ್ತು ದ.ಕ. ಜಿಲ್ಲೆಗಳ ಪಂಚಾಯತ್ ರಾಜ್ ಮತ್ತು ನಗರ ಸ್ಥಳೀಯಾಡಳಿತ ಪ್ರತಿನಿಧಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಪಥಸಂಚಲನದಲ್ಲಿ ವಿವಿಧ ಸ್ಥಬ್ದಚಿತ್ರಗಳ ಪ್ರದರ್ಶನ,ಕೋವಿಡ್ ಲಸಿಕೆ ಕುರಿತ ಸ್ಥಬ್ದಚಿತ್ರ, ತಟ್ಟೀರಾಯ, ಕೊರಗರ ಡೋಲು ವಾದನ,ಯಕ್ಷಗಾನದ ವೇಷಧಾರಿಗಳು, ಕಂಬಳ ಕೋಣಗಳು, ಕಹಳೆ ವಾದನ, ಸಾಂಪ್ರದಾಯಿಕ ಧರಿಸು ತೊಟ್ಟ ಜನಪ್ರತಿನಿಧಿಗಳ ತಂಡ ಪಥಸಂಚಲನದ ಮೆರುಗನ್ನು ಇಮ್ಮಡಿ ಗೊಳಿಸಿದರು.

ಉಡುಪಿ ಮತ್ತು ದ.ಕ. ಜಿಲ್ಲೆಗಳ ಪಂಚಾಯತ್ ರಾಜ್ ಕ್ಷೇತ್ರದಲ್ಲಿ ಗಣನೀಯ ಸಾಧನೆ ತೋರಿದ ಪಂಚಾಯತ್ ಗಳಿಗೆ ಮತ್ತು ಪಥ ಸಂಚಲನದಲ್ಲಿ ವಿಜೇತ ತಂಡಕ್ಕೆ ಬಹುಮಾನ ವಿತರಿಸಲಾಯಿತು.

 

 

ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಪಂಚಾಯತ್ ಅದ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ರಾಷ್ಟ್ರೀಯ ಮಹಿಳಾ ಅಯೋಗ ಸದಸ್ಯೆ ಶ್ಯಾಮಲಾ ಎಸ್. ಕುಂದರ್, ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಉಪಾಧ್ಯಕ್ಷ ಕಿರಣ್ ಕೊಡ್ಗಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಅತೀಕ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್ ಮತ್ತಿತರರು ಉಪಸ್ಥಿತರಿದ್ದರು.

 

 
 
 
 
 
 
 
 
 
 
 

Leave a Reply