ನಾಳೆಯೂ (ಜು.27) ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆ ಮುಂದುವರಿದ ಕಾರಣ ಜಿಲ್ಲೆಯಲ್ಲಿ ಜುಲೈ 27ರಂದು (ಗುರುವಾರ) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ.

ಹವಾಮಾನ ಇಲಾಖೆಯ ಆರೆಂಜ್ ಅಲರ್ಟ್ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಜುಲೈ 27 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ.

 
 
 
 
 
 
 
 
 
 
 

Leave a Reply