ಪ್ರವಾಸ ತಂದ ಸಾವು~ ಮೂವರು ಸಮುದ್ರ ಪಾಲು 

ಪ್ರವಾಸಕ್ಕೆಂದು ಬಂದಿದ್ದ ಕೇರಳ ಮೂಲದ ಮೂವರು ವಿದ್ಯಾರ್ಥಿಗಳು ಸಮುದ್ರ ಪಾಲಾದ ಘಟನೆ ಮಲ್ಪೆ ಸೈಂಟ್ ಮೇರಿಸ್ ಐಲ್ಯಾಂಡ್ ನಲ್ಲಿ ಗುರುವಾರ ನಡೆದಿದೆ.

ಮೃತರನ್ನು ಅಲೆನ್ ರೇಜಿ (22), ಅಮಲ್ ಸೀ ಅನಿಲ್( 22) ಮತ್ತು ಆ್ಯಂಟನಿ ಶೆಣೈ (21) ಎಂದು ಗುರುತಿಸಲಾಗಿದೆ. ವಿದ್ಯಾರ್ಥಿಗಳು ಕೇರಳದ ಕೊಟ್ಟಾಯಂನ ಮಂಗಳಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಕಾಲೇಜಿನ ಇಬ್ಬರು ಪ್ರಾಧ್ಯಾಪಕರೊಂದಿಗೆ 42 ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಬಂದಿದ್ದರು.

ಸೈಂಟ್ ಮೇರಿಸ್ ಸಮುದ್ರ ಭಾಗದಲ್ಲಿ ನೀರಿನಲ್ಲಿ ಆಟವಾಡಲು ಇಳಿದ ಸಂದರ್ಭ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಡೆಯಾಗಿದ್ದಾರೆ. ಸಮುದ್ರ ಪಾಲಾದ ಮೂವರು ವಿದ್ಯಾರ್ಥಿಗಳ ಪೈಕಿ ಇಬ್ಬರ ಮೃತ ದೇಹ ಪತ್ತೆಯಾಗಿದ್ದು, ಮತ್ತೊರ್ವನ ಮೃತ ದೇಹಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ. ಈ ಬಗ್ಗೆ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 
 
 
 
 
 
 
 
 
 
 

Leave a Reply