‘ಮನೆಯಲ್ಲಿ ಗಂಡು ಮಕ್ಕಳಿಗೆ​ ಅಥವಾ ಹೆಣ್ಣು ಮಕ್ಕಳಿಗೆ ಶಿಕ್ಷಣ ಅಗತ್ಯವೇ?​~ಉಪನ್ಯಾಸಕಿ ಜಯಲಕ್ಷ್ಮೀ.

ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಉಡುಪಿ ತಾಲೂಕು ಮಣಿಪಾಲ ವಲಯದ ಮಂಚಿಕೋಡಿ ಶಾಲೆಯ ಚೈತನ್ಯ ಜ್ಞಾನ ವಿಕಾಸ ಕೇಂದ್ರದಲ್ಲಿ ಮಹಿಳಾ ವಿಚಾರಗೋಷ್ಠಿ ದಿನಾಂಕ 5/9/21 ರಂದು ಮಂಚಿಕೋಡಿ ಶಾಲೆಯಲ್ಲಿ ನಡೆಯಿತು.ತಾಲೂಕು ಯೋಜನಾಧಿಕಾರಿ ರೋಹಿತ್ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿ ಪೂರ್ಣಪ್ರಜ್ಞ ಕಾಲೇಜಿನ ಉಪನ್ಯಾಸಕಿ ಜಯಲಕ್ಷ್ಮೀ ಅವರು ‘ಮನೆಯಲ್ಲಿ ಗಂಡು ಮಕ್ಕಳಿಗೆ ಶಿಕ್ಷಣ ಅಗತ್ಯವೇ?, ಹೆಣ್ಣು ಮಕ್ಕಳಿಗೆ ಶಿಕ್ಷಣ ಅಗತ್ಯವೇ? ವಿಷಯದ ಕುರಿತು ಚರ್ಚೆ ಕಾರ್ಯಕ್ರಮ ನಡೆಸಿಕೊಟ್ಟರು.

ಕೀರ್ತಿ ಒಕ್ಕೂಟದ ಅಧ್ಯಕ್ಷೆ ಸುಪ್ರೀತಾ ರಾಜೇಶ್‌ ಅಧ್ಯಕ್ಷತೆ ವಹಿಸಿದ್ದರು. ಮಂಚಿಕೋಡಿ ಶಾಲಾ ಶಿಕ್ಷಕಿಯರಾದ ಆಶಾ, ಲಲಿತಾ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಕವಿತಾ, ಸೇವಾ ಪ್ರತಿನಿಧಿ ಚಂದ್ರಕಲಾ, ಕೇಂದ್ರದ ಸಂಯೋಜಕಿ ದಮಯಂತಿ, ಅನುಷಾ, ಕೀರ್ತಿ ಚೈತನ್ಯ ಜ್ಞಾನ ವಿಕಾಸ ಕೇಂದ್ರದ ಎಲ್ಲ ಸದಸ್ಯರು ಉಪಸ್ಥಿತರಿದ್ದರು

 
 
 
 
 
 
 
 
 
 
 

Leave a Reply