ಶಿರ್ವ ಜಾತ್ರೆಯಲ್ಲಿ ಚುನಾವಣಾ ಭಾಷಣ; ಜಯಪ್ರಕಾಶ್ ಹೆಗ್ಡೆ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲು

ಕಾಂಗ್ರೆಸ್‌ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರು ದೈವಸ್ಥಾನದ ಜಾತ್ರೆಗೆ ತೆರಳಿ ಚುನಾವಣಾ ಭಾಷಣ ಮಾಡಿದ್ದಕ್ಕಾಗಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ. ‌

ಪ್ರೈಯಿಂಗ್ ಸ್ಕಾಡ್ ದೂರಿನ‌ ಅನ್ವಯ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಶಿರ್ವ ಗ್ರಾಮದ ಜಾರಂದಾಯ ದೈವಸ್ಥಾನದ ಜಾತ್ರೆಗೆ ತೆರಳಿ ಜೆಪಿ ಹೆಗ್ಡೆ ಚುನಾವಣಾ ಸಭೆ ನಡೆಸಿದ್ದಾರೆಂದು ದೂರು ನೀಡಲಾಗಿದೆ. ‌

ಮಾರ್ಚ್ 26ರಂದು ರಾತ್ರಿ 11:30ರ ಸುಮಾರಿಗೆ ಹೆಗ್ಡೆ ಶಿರ್ವ ಜಾರಾಂದಾಯ ದೈವಸ್ಥಾನದ ಜಾತ್ರೆಗೆ ತೆರಳಿದ್ದರು. ಅಲ್ಲಿಯೇ ಸಾರ್ವಜನಿಕರೊಂದಿಗೆ ಸಭೆ ನಡೆಸಿದ್ದರು. ಈ ಬಗ್ಗೆ ಕಾಪು ಪ್ರೈಯಿಂಗ್ ಸ್ಕಾಡ್ ಟೀಮ್ ಗೆ ಮಾಹಿತಿ ಬಂದಿತ್ತು. ಅದರಂತೆ ತಂಡ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿತ್ತು. 

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ದೈವಸ್ಥಾನದಲ್ಲಿ ತಡರಾತ್ರಿಯ ವರೆಗೆ ಕಾರ್ಯಕ್ರಮ ನಡೆಸಿದ್ದರು. ಧಾರ್ಮಿಕ ಸ್ಥಳದಲ್ಲಿ ಚುನಾವಣಾ ಕಾರ್ಯಕ್ರಮ ನಡೆಸಿ ಸಾರ್ವಜನಿಕರಿಗೆ ಪ್ರಭಾವ ಬೀರಿದ್ದು ನೀತಿ ಸಂಹಿತೆ ಉಲ್ಲಂಘಿಸಿದ್ದಾರೆಂದು ದೂರು ದಾಖಲಾಗಿದೆ.

 
 
 
 
 
 
 
 
 
 
 

Leave a Reply