ಶ್ರೀಕೃಷ್ಣ ಮಠಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಸೋಮವಾರ ಉಡುಪಿಗೆ ಆಗಮಿಸಿದ್ದು, ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿದರು. ಮಠಕ್ಕೆ ಆಗಮಿಸಿದ ನಡ್ದಾ ಅವರನ್ನು ಮಠದ ದಿವಾನ ವರದರಾಜ ಆಚಾರ್ಯ ಮಾಲಾರ್ಪಣೆ ಮಾಡಿ ಸ್ವಾಗತಿಸಿದರು.

ಜೆ. ಪಿ.ನಡ್ಡಾ ಉಡುಪಿಗೆ ಆಗಮನ ಕೃಷ್ಣ ಮಠ ಭೇಟಿ, ಸಂತರೊಂದಿಗೆ ಸಭೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಷ್ಟ್ರೀಯ ಪ್ರ. ಕಾರ್ಯದರ್ಶಿ ಸಿ. ಟಿ. ರವಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಸುನಿಲ್ ಕುಮಾರ್, ಶಾಸಕ ಕೆ‌. ರಘುಪತಿ ಭಟ್ ಮುಖಂಡರಾದ ಪ್ರದೀಪ ರಾವ್, ಸುಪ್ರಸಾದ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಹಾಕೆ ಮಚ್ಚಿಂದ್ರ ಅವರ ನೇತೃತ್ವದಲ್ಲಿ ಭದ್ರತೆ ವಹಿಸಲಾಗಿತ್ತು. ಶ್ರೀ ಕೃಷ್ಣ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿದ ಬಳಿಕ ಪೇಜಾವರ ಮಠಕ್ಕೆ ತೆರಳಿದ ನಡ್ಡಾ ಅವರು ಅಷ್ಟಮಠಾಧೀಶರು ಹಾಗೂ ಕರಾವಳಿ ಭಾಗದ ವಿವಿಧ ಮಠಾಧೀಶರೊಂದಿಗೆ ಮಾತುಕತೆ ನಡೆಸಿದರು‌‌. 

ಕರಾವಳಿ ಭಾಗದ ಹತ್ತಕ್ಕೂ ಅಧಿಕ ಮಠಾಧೀಶರು, ಹಿಂದು ಸಮುದಾಯದ ಮುಖಂಡರು ಭಾಗಿಯಾಗಿದ್ದು ಕರಾವಳಿ ಭಾಗದ ಬೇಡಿಕೆಗಳ ಕುರಿತು ಸಮಾಲೋಚನೆ ನಡೆಸಿದರು‌.

 
 
 
 
 
 
 
 
 
 
 

Leave a Reply