ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ಮುಖ್ಯ- ಧಾರ್ಮಿಕ ಉಪನ್ಯಾಸ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ,ಸಿ ಟ್ರಸ್ಟ್ ರಿ ಉಡುಪಿ ತಾಲೂಕಿನ ಮಣಿಪಾಲ ವಲಯದ ಜ್ಯೋತಿ ಜ್ಞಾನವಿಕಾಸ ಕೇಂದ್ರದ ಮಾಸಿಕ ಸಭೆಯಲ್ಲಿ ವರಮಹಾಲಕ್ಷ್ಮಿ ಪೂಜೆಯನ್ನು ನಡೆಸಲಾಯಿತು.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಪ್ರಿಯಾಂಕ ರವರು ವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ಶ್ರೀಮತಿ ಜಯಲಕ್ಷ್ಮಿ ಅವರು ವರಮಹಾಲಕ್ಷ್ಮಿ ಪೂಜೆಯ ಆಚರಣೆಯ ಮಹತ್ವ, ಮಕ್ಕಳಲ್ಲಿ ಬೆಳೆಸಬೇಕಾದ ಸಂಸ್ಕೃತಿ ಸಂಸ್ಕಾರದ ಕುರಿತು ಧಾರ್ಮಿಕ ಉಪನ್ಯಾಸ ಹಾಗೂ ಮಾಹಿತಿ ನೀಡಿದರು, ಹಾಗೆಯೇ ಉಡುಪಿ ತಾಲೂಕಿನ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀಯುತ ಸತ್ಯಾನಂದ ನಾಯಕ್ ರವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿವಿಧ ಕಾರ್ಯಕ್ರಮಗಳು ಸಮಾಜಕ್ಕೆ ಉತ್ತಮ ಸಂದೇಶಗಳನ್ನು ನೀಡುತ್ತದೆ ಎಂದು ತಿಳಿಸಿದರು, ಈ ಕಾರ್ಯಕ್ರಮದಲ್ಲಿ ಉಡುಪಿ ತಾಲೂಕಿನ ಜ್ಞಾನವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ಕವಿತಾ, ಮಣಿಪಾಲ ವಲಯದ ಮೇಲ್ವಿಚಾರಕಿ ಶ್ರೀಮತಿ ಮಂಜುಳಾ, ಸೇವಾ ಪ್ರತಿನಿಧಿ ಶ್ರೀಮತಿ ಶಶಿಕಲಾ ಮತ್ತು ಜ್ಞಾನ ವಿಕಾಸ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು

 
 
 
 
 
 
 
 
 
 
 

Leave a Reply