ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇಗುಲ…ಬ್ರಹ್ಮಕಲಶೋತ್ಸವ ಚಪ್ಪರ ಮುಹೂರ್ತ ಸಂಪನ್ನ

ಉಡುಪಿ, ಮೇ ೧೯: ಸಮಗ್ರ ಜೀರ್ಣೋದ್ಧಾರಗೊಳ್ಳುತ್ತಿರುವ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇಗುಲದ ಬ್ರಹ್ಮಕಲಶೋತ್ಸವವು ಜೂ.೧ರಿಂದ ೧೦ರ ತನಕ ನಡೆಯಲಿದ್ದು, ಇದರ ಪೂರ್ವಭಾವಿಯಾಗಿ ದೇಗುಲದ ಆವರಣದಲ್ಲಿ ದೇವಸ್ಥಾನದ ತಂತ್ರಿಗಳಾದ ಪಾಡಿಗಾರು ಶ್ರೀನಿವಾಸ ತಂತ್ರಿಗಳ ನೇತೃತ್ವದಲ್ಲಿ ಅರ್ಚಕರಾದ ರಾಧಾಕೃಷ್ಣ ಉಪಾಧ್ಯಾಯ, ಶ್ರೀನಿಽ ಉಪಾಧ್ಯಾಯ ಅವರ ಪೌರೋಹಿತ್ಯದಲ್ಲಿ ಗುರುವಾರ ಚಪ್ಪರ ಮುಹೂರ್ತ ನೆರವೇರಿತು.

ಮೂಡುಬಿದಿರೆಯ ಜಿ.ಕೆ. ಡೆಕೋರೇರ‍್ಸ್ನ ಗಣೇಶ್ ಕಾಮತ್ ಅವರಿಗೆ ಚಪ್ಪರ ನಿರ್ಮಿಸಲು ವೀಳ್ಯೆ ಕೊಡಲಾಯಿತು. ಕರಾವಳಿ ಅಭಿವೃದ್ಧಿ ಪ್ರಾಽಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ| ಕಟ್ಟೆ ರವಿರಾಜ ವಿ.ಆಚಾರ್ಯ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶ್ರೀನಾಗೇಶ್ ಹೆಗ್ಡೆ,
ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪುರುಷೋತ್ತಮ ಪಿ.ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕೆ.ರಾಘವೇಂದ್ರ ಕಿಣಿ, ನಗರಸಭಾ ಸದಸ್ಯರಾದ ಗಿರೀಶ್ ಎಂ.ಅoಚನ್, ಗೀತಾ ಶೇಟ್, ಜಿಲ್ಲಾ ಧಾರ್ಮಿಕ ದತ್ತಿ ಪರಿಷತ್‌ನ ಸದಸ್ಯ ಯು.ಮೋಹನ ಉಪಾಧ್ಯ, ಹೊರೆಕಾಣಿಕೆ ಸಮಿತಿ ಅಧ್ಯಕ್ಷ
ಭಾಸ್ಕರ ಶೇರಿಗಾರ್, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಕಾಮತ್, ವ್ಯವಸ್ಥಾಪನ ಸಮಿತಿ ಸದಸ್ಯರಾದ ಮಂಜುನಾಥ ಹೆಬ್ಬಾರ್, ಕೆ.ನಾಗರಾಜ್ ಶೆಟ್ಟಿ, ರಮೇಶ್ ಶೇರಿಗಾರ್, ಕಿಶೋರ್ ಸಾಲ್ಯಾನ್, ಸಂಧ್ಯಾ ಪ್ರಭು, ಶಶಿಕಲಾ ಭರತ್, ಗಣೇಶ್ ನಾಯಕ್, ದೇವಸ್ಥಾನದ ಪವಿತ್ರಪಾಣಿ ಕುಂಜಿತ್ತಾಯ ಶ್ರೀನಿವಾಸ ಉಪಾಧ್ಯ, ಜೀರ್ಣೋದ್ಧಾರ ಸಮಿತಿ ಜತೆಕಾರ್ಯದರ್ಶಿ ಸತೀಶ್ ಕುಲಾಲ್, ಸದಸ್ಯರಾದ ಅಶ್ವತ್ಥ್ ದೇವಾಡಿಗ, ರಾಕೇಶ್ ಜೋಗಿ,
ಗಣೇಶ್ ಆಚಾರ್ಯ ಕಡಿಯಾಳಿ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply