ಜೂ.17: ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ಕಛೇರಿಯಲ್ಲಿ ‘ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ’ಯ ಪೂರ್ವಭಾವಿ ಸಭೆ

ಪ್ರತೀ ವರ್ಷ ಕರ್ಕಾಟಕ ಅಮಾವಾಸ್ಯೆ ದಿನದಂದು ನಡೆಯುವ ‘ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ’ಯು ಈ ಬಾರಿ ಆಗಸ್ಟ್ 4 ರಂದು ಕುಂದಾಪುರದಲ್ಲಿ ನಡೆಯಲಿದೆ ಎಂದು ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.

ಇದರ ಜೊತೆಗೆ ತೆರೆಯ ಮರೆಗೆ ಸರಿದಿರುವ ಕುಂದಾಪುರ ಭಾಗದ ಗ್ರಾಮ್ಯ ಕ್ರೀಡೆಗಳನ್ನು ಮುಖ್ಯ ವಾಹಿನಿಗೆ ತರುವ ಸದುದ್ದೇಶದಿಂದ ಗ್ರಾಮೀಣ ಕ್ರೀಡಾಕೂಟವನ್ನು ಕೂಡಾ ಜರುಗಿಸುವ ಯೋಜನೆಯನ್ನು ಹೊಂದಲಾಗಿದೆ.

ಈ ಎರಡೂ ಕಾರ್ಯಕ್ರಮಗಳ ರೂಪುರೇಷೆಗಳನ್ನು ನಿರ್ಧರಿಸಲು ಹಾಗೂ ಅದ್ದೂರಿಯ ತಯಾರಿಯನ್ನು ನಡೆಸುವ ಸಲುವಾಗಿ ಜೂನ್ 17, ಸೋಮವಾರ ಸಂಜೆ ಗಂಟೆ 5.00ಕ್ಕೆ ಕುಂದಾಪುರ ಎವಿಎನ್ ಬಿಲ್ಡಿಂಗ್ ನಲ್ಲಿರುವ (ಹೊಟೇಲ್ ಡಿಪ್ಲೋಮೆಟ ಸಮೀಪ) ‘ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್’ ಕಛೇರಿಯಲ್ಲಿ ಪೂರ್ವಭಾವಿ ಸಭೆಯನ್ನು ಕರೆಲಾಗಿದೆ.

ಈ ಸಭೆಯಲ್ಲಿ ಕುಂದಾಪ್ರ ಕನ್ನಡ ಭಾಷೆ ವ್ಯಾಪ್ತಿಯ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಕುಂದಾಪ್ರ ಕನ್ನಡ ಅಭಿಮಾನಿಗಳು ಉಪಸ್ಥಿತರಿದ್ದು ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply