ಕಾಂತಾರ ವರಾಹರೂಪಂ ಹಾಡು ಬಳಕೆಗೆ ಅನುಮತಿ!!

ಕಾಂತಾರ ಚಿತ್ರದ ವರಾಹರೂಪಂ ಹಾಡಿನ ವಿವಾದದಲ್ಲಿ ಹೊಂಬಾಳೆ ಫಿಲ್ಮ್ಸ್‌ಗೆ ಮೊದಲ ಯಶಸ್ಸು ಸಿಕ್ಕಿದ್ದು, ಈ ಹಿಂದಿನಂತೆಯೇ ವರಾಹರೂಪಂ ಹಾಡು ಬಳಕೆಗೆ ಅನುಮತಿ ಸಿಕ್ಕಿದೆ.

ಕೃತಿಚೌರ್ಯದ ಆರೋಪ ಮಾಡಿದ್ದ ‘ಥೈಕ್ಕುಡಂ ಬ್ರಿಡ್ಜ್’ ಅರ್ಜಿಯನ್ನು ಕೇರಳದ ಕೋಝಿಕ್ಕೋಡ್ ಜಿಲ್ಲಾ ನ್ಯಾಯಾಲಯ, ವಿಚಾರಣೆಗೆ ನ್ಯಾಯವ್ಯಾಪ್ತಿ ಅಡ್ಡಿ ಎಂದು ಹೇಳಿ ಅರ್ಜಿಯನ್ನೇ ವಜಾಗೊಳಿಸಿದೆ.

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಪ್ರಕಟಿಸಿದ ವರಾಹರೂಪಂ ಹಾಡಿನ ಬರಹಗಾರ ಶಶಿರಾಜ್‌ ಕಾವೂರು, ಇಂದು ಕೆಳ ನ್ಯಾಯಾಲಯವು ಎರಡೂ ಕಡೆಯವರ ವಾದ ಆಲಿಸಿದ  ಬಳಿಕ ಥೈಕ್ಕುಡಂ ಬ್ರಿಡ್ಜ್ ಅರ್ಜಿಯನ್ನು ವಜಾಗೊಳಿಸಿದೆ ಮತ್ತು ವರಾಹರೂಪಂ ಹಾಡಿಗೆ ನೀಡಲಾಗಿದ್ದ ತಡೆಯಾಜ್ಞೆಯನ್ನು ತೆರವು ಮಾಡಿದೆ. ನ್ಯಾಯ ಗೆದ್ದಿತು. ಜೈ ತುಳುನಾಡು ಎಂದು ಬರೆದುಕೊಂಡಿದ್ದಾರೆ.

ಕೇರಳದ ಸಂಗೀತ ಬ್ಯಾಂಡ್ ಥೈಕ್ಕುಡಂ ಬ್ರಿಡ್ಜ್ ಕಾಂತಾರ ಸಿನಿಮದ ʼವರಾಹರೂಪಂʼ ಕೃತಿಚೌರ್ಯದ ಆರೋಪ ಮಾಡಿ ಕೇಸ್‌ ದಾಖಲಿಸಿತ್ತು. ಅರ್ಜಿಯನ್ನು ಮಾನ್ಯ ಮಾಡಿದ್ದ ಪಾಲಕ್ಕಾಡ್ ಜಿಲ್ಲಾ ನ್ಯಾಯಾಲಯ ಮತ್ತು ಕೋಝಿಕ್ಕೋಡ್ ಪ್ರಧಾನ ಜಿಲ್ಲಾ ನ್ಯಾಯಾಲಯ ಕಾಂತಾರ ನಿರ್ಮಾಪಕರಿಗೆ ವರಾಹರೂಪಂ ಹಾಡನ್ನು ಬಳಸದಂತೆ ತಾತ್ಕಾಲಿಕ ತಡೆಯಾಜ್ಞೆ ನೀಡಿತ್ತು. ಮುಂದಿನ ಆದೇಶದವರೆಗೆ ಸಿಂಕ್ರೊನೈಸ್ ಮಾಡಿದ ವರಾಹರೂಪಂ ಗೀತೆಯೊಂದಿಗೆ ಕಾಂತಾರ ಚಿತ್ರದ ಪ್ರದರ್ಶನ, ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆ, ಸ್ಟ್ರೀಮಿಂಗ್ ಮಾಡದಂತೆ ಜಿಲ್ಲಾ ನ್ಯಾಯಾಲಯ ನಿರ್ಬಧ ವಿಧಿಸಿತ್ತು.

Leave a Reply