ಉಡುಪಿ ಜು. 1- ಜಿಲ್ಲಾಧಿಕಾರಿ ಕಚೇರಿ ಎದುರು ಕರವೇ ಧರಣಿ

ಉಡುಪಿ: ‘ಕರ್ನಾಟಕದಲ್ಲಿ ಕನ್ನಡಿಗರಿಗೇ ಉದ್ಯೋಗ’ ಚಳವಳಿ ಅಂಗವಾಗಿ ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕವು ಜುಲೈ 1 ರಂದು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲಿದೆ.

ಬೆಳಗ್ಗೆ 10ರಿಂದ ಮಧ್ಯಾಹ್ನ 2:00 ಗಂಟೆಯವರೆಗೆ ಧರಣಿ ನಡೆಸಿ ಸಿಎಂಗೆ ಬರೆದ ಮನವಿ ಪತ್ರವನ್ನ ಜಿಲ್ಲಾಧಿಕಾರಿಗೆ ಸಲ್ಲಿಸಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ ತಿಳಿಸಿದ್ದಾರೆ.

ಕರ್ನಾಟಕದ ಎಲ್ಲ ಬಗೆಯ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಸಿಂಹ ಪಾಲು ಇರಬೇಕು ಎನ್ನುವುದು ಕನ್ನಡಿಗರ ಬೇಡಿಕೆಯಾಗಿದೆ.

ಡಾ. ಸರೋಜಿನಿ ಮಹಿಷಿ ವರದಿ ಸಮರ್ಪಕವಾಗಿ ಜಾರಿಯಾಗಿಲ್ಲ. ಹೊರ ರಾಜ್ಯ ದವರು ಕನ್ನಡಿಗರ ಉದ್ಯೋಗ ಕಿತ್ತುಕೊಳ್ಳುತ್ತಿದ್ದು, ಕನ್ನಡಿಗರು ತಮ್ಮ ನೆಲದಲ್ಲೇ ನಿರುದ್ಯೋಗಿಗಳಾಗುವ ಸ್ಥಿತಿ ನಿರ್ಮಾಣವಾಗು ತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

 ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕೂಡಾ ಈ ಉದ್ಯೋಗ ಚಳುವಳಿಗೆ ಸಂಪೂರ್ಣ ಬೆಂಬಲ ನೀಡುತ್ತಿದೆ ಎಂದು ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ತಿಳಿಸಿದ್ದಾರೆ.

ಕನ್ನಡಿಗರ ಮಕ್ಕಳಿಗೆ ಉದ್ಯೋಗದಲ್ಲಿ ಮೀಸಲಾತಿಗಾಗಿ ವೇದಿಕೆಯ ರಾಜ್ಯ ಅಧ್ಯಕ್ಷ ಟಿ.ಎ. ನಾರಾಯಣ ಗೌಡರ ನೇತೃತ್ವದಲ್ಲಿ 2 ದಶಕದಿಂದ ಹೋರಾಟ ನಡೆಸುತ್ತ ಬರಲಾಗುತ್ತಿದೆ. ಇದೀಗ ಉದ್ಯೋಗ ಚಳವಳಿ ನಡೆಸಲಾಗುತ್ತಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply