ಕರ್ನಾಟಕ ಬಂದ್​ಗೆ ಕರೆಕೊಟ್ಟವರಿಗೆ ಶಾಕ್ ನೀಡಿದ ಹೈಕೋರ್ಟ್

ರಾಜ್ಯದಲ್ಲಿ ಕರ್ನಾಟಕ ಬಂದ್​ಗೆ ಕರೆಕೊಟ್ಟ ಬೆನ್ನಲ್ಲೇ ಕನ್ನಡ ಪರ ಸಂಘಟನೆಗಳಿಗೆ ಹೈಕೋರ್ಟ್ ಹೊಸ ಶಶಾಕ್ ನೀಡಿದೆ. ಬಂದ್​​ನಿಂದ ಆಗುವ ಆರ್ಥಿಕ ನಷ್ಟಕ್ಕೆ ಆಯೋಜಕರೇ ಹೊಣೆಯಾಗಲಿದ್ದು, ಬೀದಿ ಬದಿ ವ್ಯಾಪಾರಿಗಳಿಗಾಗುವ ನಷ್ಟಕ್ಕೂ ಅವರೆ ನೇರ ಹೊಣೆ ಎಂದು ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿ ಹೈಕೋರ್ಟ್ ಎಚ್ಚರಿಸಿದೆ.

ಹಾಗೆ ಬಂದ್, ರಾಲಿ ವೇಳೆ ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಮಾಡಿದರೆ ಕಟ್ಟುನಿಟ್ಟಿನ ಕ್ರಮಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ಈ ಕುರಿತು ವಾಟಾಳ್ ಪಕ್ಷ ಸೇರಿ ಕೆಲವು ರಾಜಕೀಯ ಪಕ್ಷಗಳಿಗೆ ಹೈಕೋರ್ಟ್ ನೋಟಿಸ್ ನೀಡಿದೆ. ಡಿಸೆಂಬರ್ 17 ರೊಳಗೆ ಪ್ರತಿಕ್ರಿಯೆ ಸಲ್ಲಿಸಲು ಪಕ್ಷಗಳಿಗೆ ತಿಳಿಸಿದೆ.

ಇಎ ಮಾಸ್ಕ್, ಸಾಮಾಜಿಕ ಅಂತರದ ಬಗ್ಗೆ ಪೊಲೀಸರು ನಿಗಾ‌ ಇಡಬೇಕಾಗಿದ್ದು, ನಿಯಮಗಳನ್ನು ಉಲ್ಲಂಘಿಸಿದವರಿಂದ ಪೊಲೀಸರು ದಂಡ ಸಂಗ್ರಹಿಸಬೇಕು. ಸರ್ಕಾರ ಕೂಡಾ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಿಜೆ ಎ.ಎಸ್ ಒಕಾ ನೇತೃತ್ವದ ವಿಭಾಗೀಯ ಪೀಠ ಆದೇಶ ನೀಡಿದೆ.

 
 
 
 
 
 
 
 
 
 
 

Leave a Reply