Janardhan Kodavoor/ Team KaravaliXpress
24.6 C
Udupi
Sunday, September 25, 2022
Sathyanatha Stores Brahmavara

ನಾಡೋಜ ಡಾ. ಮಹೇಶ್ ಜೋಶಿಯವರಿಗೆ ರಾಜ್ಯ ಸಚಿವರ ಸ್ಥಾನಮಾನ

ಬೆಂಗಳೂರು: ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಿಗೆ ರಾಜ್ಯ ಸಚಿವರ ಸ್ಥಾನಮಾನವನ್ನು ನೀಡಲಾಗಿದೆ.

ಕನ್ನಡಕ್ಕೆ ಪ್ರಾಮುಖ್ಯತೆ ನೀಡುವ ನಿಟ್ಟಿನಲ್ಲಿ ಕನ್ನಡಾದರತಿ ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವ ಕರ್ನಾಟಕ ಸರ್ಕಾರ, ಇದೀಗ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಿಗೂ ರಾಜ್ಯ ಸಚಿವರ ಸ್ಥಾನಮಾನವನ್ನು ನೀಡಿದೆ.

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ ಜೋಶಿ ಅವರಿಗೆ ರಾಜ್ಯ ಸಚಿವರಿಗೆ ಸಮನಾದ ಸ್ಥಾನಮಾನ ಲಭಿಸಿದೆ. ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.

ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಮಾನ್ಯ ಶ್ರೀ ನಾಡೋಜ ಡಾ.ಮಹೇಶ್ ಜೋಶಿ ಅವರಿಗೆ ಮಾನ್ಯ ಮುಖ್ಯ ಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಸಚಿವ ಸ್ಥಾನಮಾನ ನೀಡಿರುವುದು ಹೆಮ್ಮೆಯ ವಿಷಯ.

ಉಡುಪಿ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲೆ, ತಾಲ್ಲೂಕು, ಹೋಬಳಿಯ ಎಲ್ಲಾ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರ ಪರವಾಗಿ ತುಂಬು ಹೃದಯದ ಅಭಿನಂದನೆಗಳನ್ನು ನೀಲಾವರ ಸುರೇಂದ್ರ ಅಡಿಗ, ಅಧ್ಯಕ್ಷ, ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ಜಿಲ್ಲೆ ಇವರು ಸಲ್ಲಿಸಿದ್ದಾರೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!