ಕಾಪು ಮಾರಿಗುಡಿಯ ಪೂಜೆಯ ಸಂಧರ್ಭದಲ್ಲಿ ಅಂಗಡಿಗಳನ್ನು ತೆರೆಯಲು ಹಿಂದೂ ಧರ್ಮೀಯರಿಗೆ ಮಾತ್ರ ಅವಕಾಶ : ಲಾಲಾಜಿ ಆರ್ ಮೆಂಡನ್..!!

ಕಾಪು : ಶಿಕ್ಷಣ ಕ್ಷೇತ್ರದಲ್ಲಿ ಧರ್ಮ ಅಮಲನ್ನು ಪ್ರತ್ಯೇಕತೆಯ ಮಾನಸಿಕತೆಯಿಂದ ಬಿತ್ತಿ ಮುಗ್ದ ಮಕ್ಕಳ ಮನಸ್ಸನ್ನು ಹಾಳು ಮಾಡಿ, ಅವರುಗಳ ಶೈಕ್ಷಣಿಕ ಭವಿಷ್ಯದ ಜೊತೆಗೆ ಚೆಲ್ಲಾಟವಾಡುತ್ತಿರುವವರು ದೇಶದ ಸಂವಿಧಾನದಿಂದ ರೂಪಿತವಾದ ನ್ಯಾಯಾಂಗ ವ್ಯವಸ್ಥೆಯು ನೀಡಿದ ಆದೇಶವನ್ನೇ ಪ್ರಶ್ನಿಸಿ, ಅಗೌರವ ತೋರಿ ಸಾರ್ವಜನಿಕ ವ್ಯವಹಾರಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಿದವರು, ನಮ್ಮ ಹಿಂದೂ ಧಾರ್ಮಿಕ ಕ್ಷೇತ್ರಗಳಲ್ಲಿ ವ್ಯವಹಾರ ನಡೆಸಲು ನೈತಿಕತೆ ಇದೆಯೇ ಎನ್ನುವ ಪ್ರಶ್ನೆ ತಮ್ನಲ್ಲಿ ತಾವು ಮಾಡಿಕೊಳ್ಳಲಿ.

ಕರ್ನಾಟಕ ಸರಕಾರ ಹಿಂದೂ ಧಾರ್ಮಿಕ ಧರ್ಮಾದಾಯ ದತ್ತಿ ಇಲಾಖೆಯ ಅಧೀನದಲ್ಲಿರುವ ಕಾಪು ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನಡೆಯಲಿರುವ ಎರಡು ದಿನದ ಸುಗ್ಗಿ ಮಾರಿ ಪೂಜೆಯ ಸಂಧರ್ಭದಲ್ಲಿ ಅಂಗಡಿ ಮುಂಗಟ್ಟುಗಳನ್ನು ನಡೆಸಲು ಹಿಂದೂ ಧರ್ಮೀಯರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು ಈ ಬಗ್ಗೆ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮಾನ್ಯ ಶಾಸಕರು ಹಾಗೂ ಕಾಪು ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರಾದ ಲಾಲಾಜಿ ಆರ್ ಮೆಂಡನ್ ರವರು ತನ್ನ ಪತ್ರಿಕಾ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

 
 
 
 
 
 
 
 
 
 
 

Leave a Reply